fbpx

ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ ಜ. ೧೭ಕ್ಕೆ ಮುಂದೂಡಿಕೆ

  ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಕೊಪ್ಪಳ ಇವರ ಕರ್ನಾಟಕ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಜ. ೦೭ ರಂದು ಕುಷ್ಟಗಿಯಲ್ಲಿ ಜರುಗಬೇಕಿದ್ದ ಒಂದು ದಿನದ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ ಜ. ೧೭ ಕ್ಕೆ ಮುಂದೂಡಲಾಗಿದೆ.   
  ಕೈಗಾರಿಕಾ ನೀತಿ-೨೦೧೪-೧೯ ಅನ್ನು ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ ಧಾರವಾಡ ಇವರು ಕುಷ್ಟಗಿ ಗ್ರ್ಯಾನೈಟ್ ಕೈಗಾರಿಕಾ ಮಾಲೀಕರ ಸಂಘ ಹಾಗೂ ಲಯನ್ಸ್ ಕ್ಲಬ್ ಕುಷ್ಟಗಿ ಇವರ ಸಹಯೋಗದಲ್ಲಿ ಜ.೧೭ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಅವಶ್ಯವಿರುವ ಮಾಹಿತಿಗಳಾದ ಉದ್ಯಮಶೀಲತೆಯ ಮಹತ್ವ, ಸ್ವಯಂ ಉದ್ಯೋಗ ಪ್ರಾರಂಭಿಸಲು ಸಹಾಯ ನೀಡುತ್ತಿರುವ ಸಂಸ್ಥೆಗಳು, ಕೈಗಾರಿಕಾ ನೀತಿ-೨೦೧೪-೧೯, ಸ್ವಯಂ ಉದ್ಯೋಗ ಪ್ರಾರಂಭಿಸಲು ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳು, ಬ್ಯಾಂಕ್ ಸೌಲಭ್ಯಗಳು ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ತರಬೇತಿಗೆ ಆಸಕ್ತಿಯುಳ್ಳ ನಿರುದ್ಯೋಗಿ ಯುವಕ/ಯುವತಿಯರು ಹಾಜರಾಗಬಹುದು. ಅಭ್ಯರ್ಥಿಗಳು ೧೮ ರಿಂದ ೩೫ ವರ್ಷದವರಾಗಿಬೇಕು, ಕನಿಷ್ಠ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು, ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು. ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ತರಬೇತಿ ಅವಧಿಯಲ್ಲಿ ಯಾವುದೇ ರೀತಿಯ ಭತ್ಯೆ ಹಾಗೂ ಶಿಷ್ಯವೇತನ ನೀಡಲಾಗುವುದಿಲ್ಲ.   ಹೆಚ್ಚಿನ ಮಾಹಿತಿಗಾಗಿ ಶಿವಾನಂದ ವೆಂ.ಎಲಿಗಾರ-೯೪೪೮೮೧೨೯೭೪, ಎಮ್.ಜೋಶಿ-೯೯೦೨೨೨೩೮೫೦,   ಎಮ್.ಚಿನಿವಾರ-೯೯೦೨೮೯೬೭೮೮ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!