ಕೊಪ್ಪಳ : ಕರಪತ್ರದ ಮೂಲಕ ಅಪರಾಧ ತಡೆ ಮಾಸಾಚರಣೆ

 ಕೊಪ್ಪಳ ನಗರ ಸಂಚಾರ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆಯನ್ನು ಗುರುವಾರದಂದು ಕೇಂದ್ರ ಬಸ್ ನಿಲ್ದಾಣದ ಎದುರು ಕರ ಪತ್ರಗಳ ವಿತರಿಸುವ ಮೂಲಕ ಆಚರಿಸಲಾಯಿತು.

ಡಿವೈಎಸ್‌ಪಿ ರಾಜೀವ ಎಂ. ಹಾಗೂ ಸಂಚಾರ ಪೊಲೀಸ್ ಠಾಣೆ ಪಿ.ಎಸ್.ಐ ಪುಲ್ಲಯ್ಯ ರಾಠೋಡ ಹಾಗೂ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿಯವರ ನೇತೃತ್ವದಲ್ಲಿ ಕೇಂದ್ರ ಬಸ್ ನಿಲ್ದಾಣದಲ್ಲಿ ಆಟೋ ಚಾಲಕರಿಗೆ ಸಂಚಾರ ನಿಯಮಗಳನ್ನು ಪಾಲಿಸುವ ಬಗ್ಗೆ ಮತ್ತು ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವುದರಿಂದ ಆಗುವ ತೊಂದರೆಗಳ ಬಗ್ಗೆ ಮಾಹಿತಿಯನ್ನೊಳಗೊಂಡ ಭಿತ್ತಿ ಪತ್ರಗಳನ್ನು ಹಂಚಲಾಯಿತು. ಕೆಲವೊಂದು ಬಸ್ಸುಗಳಿಗೆ ಭಿತ್ತಿ ಪತ್ರಗಳನ್ನು ಅಂಟಿಸುವ ಮೂಲಕ ಹಾಗೂ ಪ್ರಯಾಣಿಕರಿಗೆ ಭಿತ್ತಿ ಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಿಗೆ ಅಪರಾಧ ತಡೆಯುವ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು.

Leave a Reply