ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

 ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹಧನ ನೀಡಲು ಜಿಲ್ಲೆಯ ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಘ ಸಂಸ್ಥೆಗಳು ಅಥವಾ ಟ್ರಸ್ಟ್‍ಗಳು ಕಲೆ, ಸಾಹಿತ್ಯ ಮತ್ತು ಸಂಸ್ಕøತಿಕ ಉದ್ದೇಶದಿಂದಲೇ ರಚಿತವಾಗಿ ಚಟುವಟಿಕೆ ನಡೆಸುತ್ತಿರಬೇಕು. ವಿವಿಧೋದ್ದೇಶ ಚಟುವಟಿಕೆ ಹೊಂದಿರುವ ಸಂಘ ಸಂಸ್ಥೆಗಳಿಗೆ, ಟ್ರಸ್ಟ್‍ಗಳನ್ನು ಪರಿಗಣಿಸಲಾಗುವುದಿಲ್ಲ. ನೊಂದಾಯಿತ ಹಾಗೂ ಸಕ್ರಿಯ ಅರ್ಹ ಸಂಘ, ಸಂಸ್ಥೆಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಸಂಸ್ಥೆಗಳು ನಿಗದಿತ ಅರ್ಜಿ ನಮೂನೆ ಹಾಗೂ ನಿಯಮಾವಳಿಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಇವರಿಂದ ಪಡೆದು ಎಲ್ಲಾ ವಿವರಗಳೊಂದಿಗೆ ಸೆ.15 ರೊಳಗಾಗಿ ಸಲ್ಲಿಸಬಹುದಾಗಿದೆ. ಸಂಘ ಸಂಸ್ಥೆಗಳಿಗೆ ಮಾತ್ರ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಪ್ರಾಯೋಜಿಸಲಾಗುವುದು. ವ್ಯಕ್ತಿಗಳು ಪ್ರಾಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ. ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಪ್ಪಳ(ದೂರವಾಣಿ ಸಂಖ್ಯೆ 08539-221417) ಸಂಪರ್ಕಿಸಬಹುದಾಗಿದೆ .

Leave a Reply