ಮತಗಟ್ಟೆಯೊಳಗೆ ಮೊಬೈಲ್ ತರುವಂತಿಲ್ಲ

  ವಿಧಾನಸಭಾ ಕ್ಷೇತ್ರಗಳ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತಗಟ್ಟೆಯೊಳಗೆ ಮೊಬೈಲ್ ಅಥವಾ ಇತರೆ ಎಲೆಕ್ಟ್ರಾನಿಕ್ ಸಾಮಗ್ರಿ ತರುವುದನ್ನು ನಿಷೇಧಿಸಲಾಗಿದೆ.
  ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ. ೦೫ ರಂದು ಬೆಳಿಗ್ಗೆ ೦೭ ಗಂಟೆಯಿಂದ ಸಂಜೆ ೦೫ ಗಂಟೆಯವರೆಗೆ ಮತದಾನ ನಡೆಯಲಿದ್ದು, ಯಾವುದೇ ಮತದಾರರು, ಏಜೆಂಟರು ಮತಗಟ್ಟೆಯೊಳಗೆ ಮೊಬೈಲ್ ಅಥವಾ ಇತರೆ ಎಲೆಕ್ಟ್ರಾನಿಕ್ ಸಾಮಗ್ರಿಗಳೊಂದಿಗೆ ಪ್ರವೇಶ ಮಾಡುವಂತಿಲ್ಲ.  ಒಂದು ವೇಳೆ ಯಾರಾದರೂ ಮೊಬೈಲ್ ಸಹಿತ ಮತಗಟ್ಟೆಯೊಳಗೆ ಪ್ರವೇಶ ಮಾಡಿದ್ದು ಕಂಡು ಬಂದಲ್ಲಿ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Leave a Reply