You are here
Home > Koppal News > ಹಾವೇರಿಯಲ್ಲಿ ಡಿ.೦೩ ರಿಂದ ರಾಜ್ಯ ಮಟ್ಟದ ಯುವಜನೋತ್ಸವ

ಹಾವೇರಿಯಲ್ಲಿ ಡಿ.೦೩ ರಿಂದ ರಾಜ್ಯ ಮಟ್ಟದ ಯುವಜನೋತ್ಸವ

  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ ಡಿ.೦೩ ರಿಂದ ೫ ರವರೆಗೆ ಹಾವೇರಿ ಜಿಲ್ಲೆ ಕಾಗಿನೆಲೆ ಅಭಿವೃದ್ದಿ ಪ್ರಾಧಿಕಾರದ ಕನಕ ಕಲಾಭವನದಲ್ಲಿ ಆಯೋಜಿಸಲಾಗಿದೆ. 
 ಕಳೆದ ನ. ೨೫ ರಂದು ಕೊಪ್ಪಳದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತಿಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ. ಯುವಜನೋತ್ಸವದಲ್ಲಿ ಭಾಗವಹಿಸುವ ಸ್ಪರ್ದಾಳುಗಳು ಡಿ.೦೩ ರಂದು ಬೆ.೧೧.೦೦ ಗಂಟೆಗೆ ಸಂಘಟಕರಲ್ಲಿ  ಹೆಸರನ್ನು ನೊಂದಾಯಿಸಿ ಉದ್ಘಾಟನಾ ಸಮಾರಂಭಕ್ಕೆ ಎಲ್ಲಾ ಸ್ಪರ್ಧಾಳುಗಳು ಕಡ್ಡಾಯವಾಗಿ ಭಾಗವಹಿಸಬೇಕು. ಭಾಗವಹಿಸುವ ಸ್ಪರ್ಧಾಳುಗಳಿಗೆ ಕೊಪ್ಪಳ ಜಿಲ್ಲೆ ಕೇಂದ್ರ ಸ್ಥಾನದಿಂದ ಹಾವೇರಿ ಜಿಲ್ಲೆ ಕಾಗಿನೆಲೆ ಅಭಿವೃದ್ದಿ ಪ್ರಾಧಿಕಾರದವರೆಗೆ ಸಾಮಾನ್ಯ ಬಸ್ ಪ್ರಯಾಣ ಭತ್ಯೆಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಛೇರಿ ದೂರವಾಣಿ ಸಂಖ್ಯೆ : ೦೮೫೩೯-೨೦೧೪೦೦ ಸಂಪರ್ಕಿಸಬಹುದು  

Leave a Reply

Top