ಜೀತ ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ : ಜ. ೭ ರಂದು ಕಾರ್ಯಾಗಾರ

  ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘವು ಜೀತ ಪದ್ಧತಿ ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಕುರಿತಂತೆ ಜಿಲ್ಲೆಯಲ್ಲಿ ನೇಮಕಗೊಂಡಿರುವ ಎಲ್ಲಾ ನಿರೀಕ್ಷಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಜ. ೦೭ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದೆ.
  ಕರ್ನಾಟಕ ರಾಜ್ಯವನ್ನು ಜೀತ ಪದ್ಧತಿ ಹಾಗೂ ಬಾಲಕಾರ್ಮಿಕ ಪದ್ಧತಿ ಮುಕ್ತ ರಾಜ್ಯವನ್ನಾಗಿಸುವ ಗುರಿ ಹೊಂದಿರುವ ಸರ್ಕಾರವು ೨೦೧೨ ರ ಅಂತ್ಯಕ್ಕೆ ಬಾಲಕಾರ್ಮಿಕ ರಹಿತ ರಾಜ್ಯವನ್ನಾಗಿ ಘೋಷಿಸಬೇಕಾಗಿದೆ.  ಈಗಾಗಲೆ ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಕಾರ್ಖಾನೆ ಮತ್ತು ಬಾಯ್ಲರ್‌ಗಳ ಇಲಾಖೆ, ನಗರಾಭಿವೃದ್ಧಿ, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ, ರೇಷ್ಮೆ, ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಕೃಷಿ, ಕೈಗಾರಿಕೆ ಮತ್ತು ವಾಣಿಜ್ಯ, ಪೊಲೀಸ್ ಇಲಾಖೆ ಸೇರಿದಂತೆ ಒಟ್ಟು ೧೧ ಇಲಾಖೆಗಳ ಅಧಿಕಾರಿಗಳು,   ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನೊಳಗೊಂಡಂತೆ ಇತರೆ ಸಿಬ್ಬಂದಿಗಳನ್ನು ಬಾಲಕಾರ್ಮಿಕ ಕಾಯ್ದೆ ೧೭ ರ ಪ್ರಕಾರ ನಿರೀಕ್ಷಕರನ್ನಾಗಿ ನೇಮಿಸಲಾಗಿದ್ದು, ಇವರಿಗೆ ಡಿ. ೦೭ ರಂದು ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.  ಸಂಬಂಧಪಟ್ಟ ಎಲ್ಲಾ ನಿರೀಕ್ಷಕರುಗಳು ಈ ತರಬೇತಿ ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸೂಚನೆ ನೀಡಿದ್ದಾರೆ.

Leave a Reply