ರಾಜ್ಯ ಉಪಾಧ್ಯಕ್ಷರಾಗಿ ಶಂಭುಲಿಂಗನಗೌಡ ಪಾಟೀಲ ಆಯ್ಕೆ

ಕೊಪ್ಪಳ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಶಂಭುಲಿಂಗನಗೌಡ ಪಾಟೀಲ ಆಯ್ಕೆಯನ್ನು ರಾಜ್ಯಾಧ್ಯಕ್ಷರಾದ ಬಸವರಾಜ ಗುರಿಕಾರ ಮಾಡಿದ್ದು ಕೊಪ್ಪಳ ಜಿಲ್ಲೆಯ ಶಿಕ್ಷಕರಿಗೆ ತುಂಬಾ ಹರ್ಷವನ್ನು ತಂದಿದ್ದು ಇಂದು ಅವರಿಗೆ ಪ್ರೀತಿಯಿಂದ ಪುಷ್ಪವನ್ನು ನೀಡಿ ಗೌರವಿಸಲಾಯಿತು. 
ಈ ಸಂದರ್ಬದಲ್ಲಿ ಮಾತನಾಡಿದ ಶಂಭುಲಿಂಗನಗೌಡ ಪಾಟೀಲ ನನ್ನನ್ನು ರಾಜ್ಯ ಉಪಾಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದು ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಹಾಗೂ ಶಿಕ್ಷಕರ ಯಾವುದೇ ಸಮಸ್ಯೆಗಳಿಗೆ ರಾಜ್ಯಮಟ್ಟದಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರು. 
ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷರಾದ ಸುರೇಶ ಅರಕೇರಿ, ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ಪೂಜಾರ, ಜಿಲ್ಲಾ ಉಪಾಧ್ಯಕ್ಷರಾದ ಮಂಜುನಾಥ ಬಿ., ಬಸವರಾಜ ಹೊಸಮನಿ, ಮಲ್ಲಪ್ಪ ಇನ್ನಿತರ ಶಿಕ್ಷಕರು ಉಪಸ್ಥಿತರಿದ್ದರೆಂದು ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಬಸವರಾಜ ಕಮಲಾಪೂರ 
Please follow and like us:

Related posts

Leave a Comment