ಡಿ. ೧೭ ರಂದು ಕೊಪ್ಪಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ.

ಕೊಪ್ಪಳ ಡಿ. ೧೫ (ಕ ವಾ) ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ. ೧೭ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ ರಾಯಚೂರು ಜಿಲ್ಲೆ ದೇವದುರ್ಗದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ ೧-೪೦ ಗಂಟೆಗೆ ಗಿಣಿಗೇರಾ ಬಳಿಯ ಎಂಎಸ್‌ಪಿಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು.  ನಂತರ ಕೊಪ್ಪಳದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.  ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ ೩-೩೦ ಗಂಟೆಗೆ ಎಂಎಸ್‌ಪಿಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಳ್ಳಾರಿ ಜಿಲ್ಲೆ ಸಂಡೂರಿಗೆ ಪ್ರಯಾಣ ಬೆಳೆಸುವರು.
ವಸತಿ ನಿಲಯಗಳಿಗೆ ೬ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕೊಪ್ಪಳ, ಡಿ.೧೫ (ಕ ವಾ) ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಇವರಿಂದ ೨೦೧೬-೧೭ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ೬ನೇ ತರಗತಿ ಪ್ರವೇಶಕ್ಕಾಗಿ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
     ಅರ್ಜಿ ನಮೂನೆಗಳನ್ನು ಎಲ್ಲಾ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ, ತಾಲೂಕಾಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಛೇರಿಗಳಲ್ಲಿ ಡಿ.೧೬ ರಿಂದ ಉಚಿತವಾಗಿ ವಿತರಿಸಲಾಗುವುದು. ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ಪಡೆದು ಸಂಬಂಧಪಟ್ಟ ವಸತಿ ಶಾಲಾ ಪ್ರವೇಶ ಪರೀಕ್ಷಾ ಅರ್ಜಿ ಸ್ವೀಕೃತಿ ಕೇಂದ್ರದ ಪ್ರಾಂಶುಪಾಲರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮತ್ತು ಪರೀಕ್ಷಾ ಪ್ರವೇಶ ಪತ್ರ ಪಡೆಯಲು ೨೦೧೬ರ ಜ.೨೦ ಕೊನೆ ದಿನಾಂಕವಾಗಿದ್ದು, ವಿದ್ಯಾರ್ಥಿ ಪ್ರವೇಶ ಪತ್ರ ಪಡೆಯಲು ೨೦೧೬ರ ಜ.೩೧ ಕೊನೆ ದಿನಾಂಕವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಕಲ್ಲೇಶ್ ಅವರು ತಿಳಿಸಿದ್ದಾರೆ.
Please follow and like us:
error