ಡಾ. ಕೆ.ವಿ. ಕ್ಯಾಲಕೊಂಡ ಅವರ ಜಾಮೀನು ರದ್ದು: ಸೆ. ೧೨ ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ

ಕೊಪ್ಪಳ ಆ. ೨೯ (ಕ.ವಾ): ಕಳೆದ ಆಗಸ್ಟ್ ೨೩ ರಂದು ಲಂಚ ಸ್ವೀಕಾರ ಆರೋಪ ಪ್ರಕರಣದಲ್ಲಿ ಕೊಪ್ಪಳ ಲೋಕಾಯುಕ್ತರ ಬಲೆಗೆ ಬಿದ್ದಿದ್ದ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕರವೀರಪ್ರಭು ಕ್ಯಾಲಕೊಂಡ ಅವರಿಗೆ ಮಂಜೂರು ಮಾಡಿದ್ದ ಮಧ್ಯಂತರ ಜಾಮೀನನ್ನು ರದ್ದುಪಡಿಸಿ ಸೆ. ೧೨ ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಲಂಚ ಸ್ವೀಕಾರ ಆರೋಪದ ಪ್ರಕರಣದಲ್ಲಿ ಆ. ೨೩ ರಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕರವೀರಪ್ರಭು ಕ್ಯಾಲಕೊಂಡ ಅವರನ್ನು ಲೋಕಾಯುಕ್ತರು ಅದೇ ದಿನದಂದು ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಸಂದರ್ಭದಲ್ಲಿ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿ ಆ. ೨೯ಕ್ಕೆ ಪ್ರಕರಣದ ವಿಚಾರಣೆ ಮುಂದೂಡಿತ್ತು. ಆದರೆ ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಮಧ್ಯಂತರ ಜಾಮೀನು ರದ್ದುಪಡಿಸಿ ಆಪಾದಿತ ಅಧಿಕಾರಿ ಡಾ. ಕೆ.ವಿ. ಕ್ಯಾಲಕೊಂಡ ಅವರನ್ನು ಸೆ. ೧೨ ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶಿಸಿದೆ

Leave a Reply