ಕರ್ನಾಟಕ ಲೋಕಸೇವಾ ಆಯೋಗ ಫಲಿತಾಂಶ ಪ್ರಕಟ

ಬೆಂಗಳೂರು, :ಕರ್ನಾಟಕ ಲೋಕಸೇವಾ ಆಯೋಗವು ನಡೆಸಿದ 2014 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಫಲಿತಾಂಶವನ್ನು ಆಯೋಗದ ವೆಬ್‍ಸೈಟ್ “http://kpsc.kar.nic.in” ನಲ್ಲಿ ನೋಡಬಹುದಾಗಿದೆ.  ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳು ಅಂಕಗಳ ಮರು-ಎಣಿಕೆಗಾಗಿ ಫಲಿತಾಂಶ ಪ್ರಕಟವಾದ 30 ದಿನಗಳೊಳಗಾಗಿ ನಿಗದಿತ ಶುಲ್ಕದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಹಾಗೂ ಆಯೋಗವು ನಡೆಸುವ 2015 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಅಧಿಸೂಚನೆಯಲ್ಲಿ ಅರ್ಹ ಸರ್ಕಾರಿ ನೌಕರರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ದಿನಾಂಕ  07-03-2015 ರೊಳಗೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು,  ಶುಲ್ಕವನ್ನು ಸ್ಕ್ಯಾನರ್ ಸೌಲಭ್ಯವಿರುವ ರಾಜ್ಯದ ಯಾವುದೇ ಗಣಕೀಕೃತ ಅಂಚೆ ಕಚೇರಿ ಶಾಖೆಗಳಲ್ಲಿ ದಿನಾಂಕ: 09-03-2015 ರವರೆಗೆ ಪಾವತಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಆಯೋಗದ ವೆಬ್‍ಸೈಟ್    “http://kpsc.kar.nic.in”   ನÀಲ್ಲಿ ಪ್ರಕಟಿಸಿರುವ ಅಧಿಸೂಚನೆಯನ್ನು ನೋಡಬಹುದಾಗಿದ್ದು,   ಮಾಹಿತಿಗಾಗಿ  ದೂರವಾಣಿ ಸಂಖ್ಯೆ 080 -30574944/30574945/30574957 ಅನ್ನು ಸಂಪರ್ಕಿಸಬಹುದಾಗಿದೆ.
Please follow and like us:
error