ಪಿಯುಸಿ ಪೂರಕ ಪರೀಕ್ಷೆ : ಜೂ.೨೭ ರಂದು ಪೂರ್ವಭಾವಿ ಸಭೆ

 ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಜುಲೈ-೦೩ ರಿಂದ ಜುಲೈ -೧೨ ರವರೆಗೆ ಜಿಲ್ಲೆಯ ೦೬ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಯನ್ನು ಶಾಂತಿಯುತವಾಗಿ ಮತ್ತು ಸುಸೂತ್ರವಾಗಿ ನಡೆಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಜೂ.೨೭ ರಂದು ಬೆಳಿಗ್ಗೆ ೧೧.೦೦ ಗಂಟೆಗೆ ಪೂರ್ವ ಭಾವಿ ಸಭೆಯನ್ನು ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ವಹಿಸಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. 
Please follow and like us:
error