ಇಂದು ಬಿಜೆಪಿ ಕಾರ್ಯಕಾರಿ ಮಂಡಳಿಯ ತುರ್ತು ಸಭೆ

  ಕೊಪ್ಪಳ ಲೋಕಸಭಾ ಚುನಾವಣೆಯ ನಿಮಿತ್ತ ಲೋಕಸಭಾ ವ್ಯಾಪ್ತಿಯ ೮ ವಿಧಾನಸಭಾ ಕ್ಷೇತ್ರಗಳ ಭಾರತೀಯ ಜನತಾ ಪಕ್ಷದ ಕಾರ್ಯಕಾರಿ ಮಂಡಳಿಯ ಸಭೆಯೂ ಇದೇ ದಿ. ೮-೨-೧೪ರಂದು ಶನಿವಾರ ಬೆಳಿಗ್ಗೆ ೧೧-೦೦ ಗಂಟೆಗೆ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ರಾಜ್ಯ ಮುಖಂಡರಾದ ಗಿರೀಶ ಪಟೇಲ್ ವಿಭಾಗಿಯ ಪ್ರಭಾರಿ ಅಶೋಕ ಗಸ್ತಿ ಪಾಲ್ಗೊಳ್ಳಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಂಗಣ್ಣ ಕರಡಿ ವಹಿಸಲಿದ್ದಾರೆ. 
ಈ ಸಭೆಯಲ್ಲಿ ಲೋಕ ಸಭಾ ವ್ಯಾಪ್ತಿಯ ೮ ವಿಧಾನ ಸಭಾ ಕ್ಷೇತ್ರಗಳ ಪಕ್ಷದ ಸಂಸದರು, ಶಾಸಕರು, ವಿಧಾನ ಪರಿಷತ್ತ್ ಸದಸ್ಯರು, ಮಾಜಿ ಶಾಸಕರು, ಪಕ್ಷದ ಮುಖಂಡರು ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು, ವಿವಿಧ ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ್, ನಗರಸಭೆ ಪಟ್ಟಣ ಪಂಚಾಯತ್, ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು ಕಾರ್ಯಕಾರಿ ಮಂಡಳಿಯ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಭಾರತೀಯ ಜನತಾ ಪಕ್ಷವು ತಿಳಿಸಿದೆ .

Leave a Reply