ಕನಕದಾಸರ ಜಯಂತಿ : ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಆಚರಿಸಲು ಸೂಚನೆ

ಕೊಪ್ಪಳ ನ. ): ಬರುವ ನ. ೧೪ ರಂದು ಕನಕದಾಸರ ಜಯಂತಿ ಆಚರಣೆಯನ್ನು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಚರಿಸಿ, ವರದಿ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ್ ಅವರು ಸೂಚನೆ ನೀಡಿದ್ದಾರೆ.
ಕನಕದಾಸರ ಜಯಂತಿ ಅಂಗವಾಗಿ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳು ಸಮವಸ್ತ್ರಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಕಾರ್ಯಕ್ರಮವನ್ನು ಬೆಳಿಗ್ಗೆ ೯ ಗಂಟೆಗೆ ಆಚರಿಸುವುದು, ಕನಕದಾಸರ ಭಾವಚಿತ್ರ ೧*೧.೫ ಅಡಿ ಅಳತೆಯದ್ದಾಗಿರಬೇಕು, ಶಾಲಾ ವಿದ್ಯಾರ್ಥಿಗಳಿಂದ ಗ್ರಾಮಗಳಲ್ಲಿ ಬೀದಿಗಳಲ್ಲಿ ಪ್ರಭಾತ ಪೇರಿ ನಿರ್ವಹಿಸುವುದು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಹಾಗೂ ಗಣ್ಯ ವ್ಯಕ್ತಿಗಳು ಶಿಕ್ಷಣ ಪ್ರೇಮಿಗಳನ್ನು ಆಹ್ವಾನಿಸುವುದು, ವಿದ್ಯಾರ್ಥಿಗಳಿಂದ ಕನಕದಾಸರಿಂದ ರಚಿತವಾದ ಭಕ್ತಿ ಗೀತೆಗಳ ಹಾಗೂ ಭಾಷಣ ಸ್ಪರ್ಧೆ ಏರ್ಪಡಿಸುವುದು, ಮಕ್ಕಳಿಗೆ ಸಿಹಿ ವಿತರಣೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿ ಶಾಲೆವಾರು ತಮ್ಮ ಹಂತದಲ್ಲಿ  ವರದಿಯನ್ನು ಸಂಗ್ರಹಿಸಿಟ್ಟುಕೊಂಡು ತಾಲೂಕಾ ಕ್ರೋಢಿಕೃತ ವರದಿಯನ್ನು ಕಛೇರಿಗೆ ಸಲ್ಲಿಸಬೇಕು.  ಕನಕದಾಸರ ಜಯಂತಿ ಆಚರಣೆ ಸಂಬಂಧ ಯಾವುದೇ ಲಿಖಿತ ಆಕ್ಷೇಪಣೆಗಳು ಅಥವಾ ಪತ್ರಿಕೆಗಳಲ್ಲಿ ವರದಿ ಪ್ರಕಟಗೊಂಡಲ್ಲಿ ಸಂಬಂಧಪಟ್ಟ ಶಾಲಾ, ಕಾಲೇಜುಗಳ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಟೇಲಿಂಗಾಚಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please follow and like us:
error

Related posts

Leave a Comment