ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ.

ಕೊಪ್ಪಳ
ಜ. ೦೨ (ಕ ವಾ) ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ
ಶಿವರಾಜ ಎಸ್ ತಂಗಡಗಿ ಅವರು ಜ. ೦೪ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ
ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
     ಸಚಿವರು ಅಂದು ಬೆಳಿಗ್ಗೆ ಕಾರಟಗಿಯಿಂದ
ಹೊರಟು ೧೦ ಗಂಟೆಗೆ ಕೊಪ್ಪಳಕ್ಕೆ ಆಗಮಿಸುವರು.  ಇಲ್ಲಿನ ಜಿಲ್ಲಾಡಳಿತ ಭವನದ ಆಡಿಟೋರಿಯಂ
ಹಾಲ್‌ನಲ್ಲಿ ಏರ್ಪಡಿಸಲಾಗಿರುವ ಜನಮನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ನಂತರ
ಮಧ್ಯಾಹ್ನ ೨-೩೦ ಗಂಟೆಗೆ ಯಲಬುರ್ಗಾ ತಾಲೂಕು ಮಂಗಳೂರಿಗೆ ತೆರಳಿ ಇಲ್ಲಿನ ಸರ್ಕಾರಿ
ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ   ಕಾಲೇಜು ಕಟ್ಟಡದ ಶಂಕುಸ್ಥಾಪನೆ, ಸಣ್ಣ ನೀರಾವರಿ
ಇಲಾಖೆ ವತಿಯಿಂದ ಸರಣಿ ಚೆಕ್ ಡ್ಯಾಂ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ
ಪಾಲ್ಗೊಳ್ಳುವರು.  ಸಂಜೆ ೫ ಗಂಟೆಗೆ ಕಾರಟಗಿಗೆ ತೆರಳಿ ಸಾರ್ವಜನಿಕ ಕುಂದುಕೊರತೆ
ವಿಚಾರಣೆ ನಡೆಸಿ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು
ತಿಳಿಸಿದ್ದಾರೆ.
Please follow and like us:
error