ಡಿ.೨೫ ರಿಂದ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು.

ಕೊಪ್ಪಳ, ಡಿ.೧೧ (ಕ ವಾ) ಕನ್ನಡ ಸಾಹಿತ್ಯ ಪರಿಷತ್ತಿನ ೨೦೧೪-೧೫ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ಡಿ.೨೫ ರಿಂದ ೨೭ ರವರೆಗೆ ಒಟ್ಟು ಮೂರು ದಿನಗಳ ಕಾಲ ರಾಜ್ಯದ ೧೭ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಪರೀಕ್ಷಾ ಪ್ರವೇಶ ಪತ್ರಗಳನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. ಡಿ.೧೫ ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಗೌರವ ಸಲಹೆಗಾರರು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-೧೮ ಇವರನ್ನು ಸಂಪರ್ಕಿಸಬಹುದಾಗಿದೆ. ಬೇರೆ ಜಿಲ್ಲೆಯವರಿಗೆ ಪ್ರವೇಶ ಪತ್ರ ತಲುಪದೇ ಇದ್ದಲ್ಲಿ ನೇರವಾಗಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪರೀಕ್ಷಾ ಕೇಂದ್ರದ ವಿಳಾಸವನ್ನು ದೂರವಾಣಿ ಸಂಖ್ಯೆ : ೦೮೦-೨೬೬೨೩೫೮೪ ಗೆ ಕರೆ ಮಾಡುವ ಮೂಲಕ ಪಡೆಯಬಹುದಾಗಿದೆ. ಅಲ್ಲದೆ ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ
www.kasapa.in  ಮೂಲಕವೂ ಸಹ ಪಡೆದುಕೊಳ್ಳಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರರಾದ ಪಿ.ಮಲ್ಲಿಕಾರ್ಜುನ ತಿಳಿಸಿದ್ದಾರೆ.
Please follow and like us:
error