ಮಾ. ೨೪ ರಂದು ನಾಲ್ಕು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

 ಕೊಪ್ಪಳ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾ. ೨೪ ರಂದು ಸೋಮವಾರ ಒಟ್ಟು ನಾಲ್ಕು ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರಿಗೆ ನಾಮಪತ್ರ ಸಲ್ಲಿಸಿದರು.
  ಸೋಮವಾರದಂದು ನಾಮಪತ್ರ ಸಲ್ಲಿಸಿದವರ ವಿವರ ಇಂತಿದೆ.  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ. ಬಸವರಾಜ್ ಹಿಟ್ನಾಳ್. ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭ್ಯರ್ಥಿಯಾಗಿ ಸಂಗಣ್ಣ ಕರಡಿ, ಸಿಪಿಐ(ಎಂಎಲ್) ಲಿಬರೇಷನ್ ಪಕ್ಷದ ಅಭ್ಯರ್ಥಿಯಾಗಿ ಗಂಗಾವತಿಯ ಭಾರಧ್ವಜ್ ಹಾಗೂ ಬಳ್ಳಾರಿಯ ವಿ. ಗೋವಿಂದ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.   ಕೊಪ್ಪಳ ಲೋಕಸಭಾ ಚುನಾವಣೆಗಾಗಿ ಇದುವರೆಗೂ ಒಟ್ಟು ೦೬ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.  ನಾಮಪತ್ರ ಸಲ್ಲಿಸಲು ಮಾ. ೨೬ ಕೊನೆಯ ದಿನಾಂಕವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ  ತಿಳಿಸಿದೆ.

Related posts

Leave a Comment