ಉದ್ಯೋಗ ಖಾತ್ರಿ ಅವ್ಯವಹಾರ ತನಿಖೆಗೆ ಆಗ್ರಹ


ಕೊಪ್ಪಳ : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಡೆದಿರುವ ಅವ್ಯವಹಾರ ಹಾಗೂ ಭ್ರಷ್ಟತೆಯನ್ನು ತನಿಖೆ ಮಾಡಬೇಕು ಎಂದು ಒತ್ತಾಯಿಸಿ ಉತ್ತರ ಕರ್ನಾಟಕ ಪ್ರದೇಶ ರೈತ ಸಂಘ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿತು. ಅಶೋಕ ಸರ್ಕಲ್ ನಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮನವಿ ಪತ್ರದಲ್ಲಿ ಬಡವರಿಗೆ , ರೈತರಿಗೆ , ನಿಜವಾ ದಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆತಿಲ್ಲ. ಈ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಅದನ್ನು ತನಿಖೆ ಮಾಡಬೇಕು ಮತ್ತು ಸರಕಾರ ಜಾರಿ ತರಲು ಉದ್ದೇಶಿಸಿರುವ ಭೂಸುದಾರಣೆ ಕಾಯ್ದೆಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಲಾಗಿದೆ. ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಡಾ.ಎಸ್.ಆರ್.ಸ್ವಾಮಿ, ಕೊಪ್ಪಳ ಜಿಲ್ಲಾಧ್ಯಕ್ಷ ದೇವಪ್ಪ ಚೌಡ್ಕಿ ಸೇರಿದಂತೆ ಉತ್ತರ ಕರ್ನಾಟಕದ ಇತರ ಜಿಲ್ಲೆಯ ಅಧ್ಯಕ್ಷರ ಹಾಗೂ ರೈತರು ಭಾಗವಹಿಸಿದ್ದರು.

Leave a Reply