ಹಿರೇಸಿಂದೋಗಿಯಿಂದ ಕಾಂಗ್ರೆಸ್ ಪಕ್ಷದ ಭಾರತ ನಿರ್ಮಾಣ ಯಾತ್ರೆ

 ಕಾಂಗ್ರೆಸ್ ಯುವ ಮುಖಂಡ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲಗಾಂಧಿ ಯುಪಿಎ ಸರ್ಕಾರದ ಐದು ವರ್ಷಗಳ ಸಾಧನೆಯನ್ನು ಗ್ರಾಮೀಣ ಪ್ರದೇಶಕ್ಕೆ ಮುಟ್ಟಿಸಲು ಭಾರತ ನಿರ್ಮಾಣ ಯಾತ್ರೆಯನ್ನು ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ಮಾಡಬೇಕು ಇದರಿಂದ ಬರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಪ್ರಚಾರ ಮಾಡಿ ಎಂಬ  ಆದೇಶದ ಹಿನ್ನಲೆಯಲ್ಲಿ ಇಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ ನಡೆಯಿತು.

ಕ್ಷೇತ್ರದ ಹಿರೇಸಿಂದೋಗಿಯಿಂದ ಪ್ರಾರಂಭವಾಗಿ ಬಿಸರಳ್ಳಿ, ಬೆಟಗೇರಿ, ಅಳವಂಡಿ ಮತ್ತು ಕವಲೂರುವರೆಗೆ ಯಾತ್ರೆ ನಡೆಯಿತು. ಈ ಯಾತ್ರೆಯಲ್ಲಿ ಕಾಂಗ್ರೆಸ್ ಮುಖಂಡರಾದ ವೆಂಕಟರಾವ್ ಘೋರ್ಪಡೆ, ಜಿಲ್ಲಾ ಕಾಂಗೈ ಅಧ್ಯಕ್ಷ ಕೆ ಬಸವರಾಜ ಹಿಟ್ನಾಳ, ಜಿಲ್ಲಾ ಮಹಿಳಾ ಕಾಂಗೈ ಅಧ್ಯಕ್ಷೆ ಇಂದಿರಾ ಭಾವಿಕಟ್ಟಿ, ಶಾಸಕ ಕೆ ರಾಘವೇಂದ್ರ ಹಿಟ್ನಾಳ ಸೇರಿದಂತೆ ಹಲವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ವೆಂಕಟರಾವ್ ಘೋರ್ಪಡೆಯವರು ಕೇಂದ್ರದಲ್ಲಿ ಹತ್ತು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ನೇತ್ರತ್ವದ ಯುಪಿಎ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ದೇಶದಲ್ಲಿ ಬಡವರ ಪರವಾದ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗೈ ಅಧ್ಯಕ್ಷ ಕೆ ಬಸವರಾಜ ಹಿಟ್ನಾಳ ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದಾಗ ಕೇವಲ ಹಣಗಳಿಕೆ ಮತ್ತು ಜೈಲಿಗೆ ಹೋಗುವುದನ್ನು ಜನತೆ ನೋಡಿ ಬೇಸರಗೊಂಡು ಕಾಂಗ್ರೆಸ್‌ಗೆ ಅಧಿಕಾರ ನೀಡಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಭಿವೃದ್ದಿ ಕ್ರಾಂತಿಯಾಗುತ್ತಿದೆ ಎಂದು ಹೇಳಿದರು.
ಶಾಸಕ ಕೆ ರಾಘವೇಂದ್ರ ಹಿಟ್ನಾಳ ಮಾತನಾಡಿ ಇಂದು ಕೆಲವರು ಮೋದಿ ಜಪ ಮಾಡುತ್ತಿದ್ದಾರೆ ಆದರೆ ಮೋದಿ ಕೇವಲ ಇಂಟರ್‌ನೆಟ್‌ನಲ್ಲಿ ಮಾತ್ರ ಪ್ರಚಾರ ಗಿಟ್ಟಿಸಿಕೊಳ್ಳುವ ನಾಯಕ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ್ ಅಧ್ಯಕ್ಷ ಮುದೇಗೌಡ, ಹೆಚ್ ಎಲ್ ಹಿರೇಗೌಡ, ಎಪಿಎಂಸಿ ಅಧ್ಯಕ್ಷ ಗವಿಸಿದ್ದಪ್ಪ ಮುದಗಲ್, ಗಾಳೆಪ್ಪ ಪುಜಾರ ಸೇರಿದಂತೆ ಹಲವರು ಭಾಗವಹಿಸಿದ್ದರು.

Leave a Reply