ವಿವಿಧ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

  ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ೬ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ೬ನೇ ತರಗತಿಯಿಂದ ೧೦ನೇ ತರಗತಿಯವರೆಗೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ೬ ರಿಂದ ೧೨ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.  ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತದೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ.  ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯಮಿತಿ ರೂ. ೨.೦೦ ಲಕ್ಷಗಳು, ಪರಿಶಿಷ್ಟ ವರ್ಗದವರಿಗೆ ರೂ. ೨.೦೦ ಲಕ್ಷಗಳು ಹಾಗೂ  ಪ್ರವರ್ಗ-೧ ರ ವಿದ್ಯಾರ್ಥಿಗಳಿಗೆ ರೂ. ೦೧ ಲಕ್ಷ.  ಪ್ರವರ್ಗ ೨ಎ, ೨ಬಿ, ೩ಎ ಮತ್ತು ೩ಬಿ ರವರಿಗೆ ರೂ. ೪೪,೫೦೦/- ಗಳ ಆದಾಯ  ಮಿತಿ ಇರುತ್ತದೆ.  ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.೫೦ ಸೀಟುಗಳು ಬಾಲಕಿಯರಿಗೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಬಾಲಕೀಯರ ವಸತಿ ಶಾಲೆಗಳಲ್ಲಿ ಶೇ.೧೦೦ ರಷ್ಟು ಸೀಟುಗಳು ಬಾಲಕಿಯರಿಗೆ ಲಭ್ಯವಿರುತ್ತವೆ. ಒಮ್ಮೆ ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ಸೇರಿದಲ್ಲಿ ೧೨ನೇ ತರಗತಿಯವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದಾಗಿದೆ. 
ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ೨೦೧೫-೧೬ ನೇ ಸಾಲಿನಲ್ಲಿ ೬ನೇ ತರಗತಿಗೆ ೫೦ ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುವುದು. ಪ್ರಸ್ತುತ ಕರ್ನಾಟಕದ ಯಾವುದೇ ಶಾಲೆಯಲ್ಲಿ ೫ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಮಾಡಿರುವ ಅರ್ಹ ವಿದ್ಯಾರ್ಥಿಗಳು ಈ ಬಗ್ಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ೨೯ನೇ ಮಾರ್ಚ ೨೦೧೫ ರಂದು ತಾಲ್ಲೂಕು / ಜಿಲ್ಲಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು.   ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಅರ್ಹತೆ ಮತ್ತು ಮೀಸಲಾತಿಯಂತೆ ಪಟ್ಟಿ ತಯಾರಿಸಿ ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು. ಮೊದಲ ಪ್ರಾಶಸ್ತ್ಯವಾಗಿ ಈ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಇತರೆ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಎರಡನೇ ಆದ್ಯತೆ ನೀಡಲಾಗುವುದು. ಪರೀಕ್ಷೆಗೆ ಬೇಕಾದ ಅರ್ಜಿಗಳು  ಜಿಲ್ಲೆಯ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳ ಕಛೇರಿಗಳಲ್ಲಿ ತಾಲ್ಲೂಕಿನ ಸಮಾಜ ಕಲ್ಯಾಣ ಅಧಿಕಾರಿಗಳ ಕಛೇರಿ/ತಾಲ್ಲೂಕಿನ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ಲಭ್ಯವಿರುತ್ತವೆ.
ಪ್ರವೇಶ ಪರೀಕ್ಷೆಗೆ ಅರ್ಜಿ ವಿತರಣೆ ಫೆ. ೦೨ ರಿಂದ ಪ್ರಾರಂಭವಾಗಲಿದ್ದು, ಸಂಬಂಧಪಟ್ಟ ವಸತಿ ಶಾಲಾ ಪ್ರವೇಶ ಪರೀಕ್ಷಾ ಅರ್ಜಿ ಸ್ವೀಕೃತಿ ಕೇಂದ್ರದ ಪ್ರಾಂಶುಪಾಲರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಫೆ. ೨೫. ಪ್ರವೇಶ ಪರೀಕ್ಷೆಯು ಮಾ. ೨೯ ಭಾನುವಾರ ಬೆಳಿಗ್ಗೆ ೧೧.೦೦ ಗಂಟೆಯಿಂದ ಮಧ್ಯಾಹ್ನ ೧.೩೦ ರವರೆಗೆ ನಡೆಯಲಿದೆ.  ಅರ್ಹತಾ ಪಟ್ಟಿಯನ್ನು ಏ. ೦೯ ರಂದು ಪ್ರಕಟಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ   ತಿಳಿಸಿದೆ. 
Please follow and like us:
error