fbpx

ಮಲ್ಲಾಪುರದಲ್ಲಿ ಜನಸಂಪರ್ಕ ಸಂವಾದ ಕಾರ್ಯಕ್ರಮ.

ಕೊಪ್ಪಳ,
ನ.೦೨ (ಕ ವಾ) ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಮಹಿಳಾ ಮತ್ತು
ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಇವರುಗಳ
ಸಂಯುಕ್ತಾಶ್ರಯದಲ್ಲಿ ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಾಗಿ  ಗಂಗಾವತಿ
ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಜನಸಂಪರ್ಕ ಸಂವಾದ ಕಾರ್ಯಕ್ರಮ ಆಯೋಜಿಸಲಾಯಿತು.
    
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಂಗಾವತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಬ್ದುಲ್
ರೆಹಮಾನ್ ಮಾತನಾಡಿ, ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ನೊಂದ ಮಹಿಳೆಯರಿಗೆ ಆಪ್ತ
ಸಮಾಲೋಚನೆ, ಉಚಿತ ಕಾನೂನು ನೆರವು, ತಾತ್ಕಾಲಿಕ ಆಶ್ರಯ ಮತ್ತು ಕೌಶಲ್ಯಾಭಿವೃದ್ಧಿ
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ
ಅನುಷ್ಠಾನಗೊಳಿಸಲಾಗಿದೆ. ಅಲ್ಲದೆ, ಸಂಕಷ್ಟಕ್ಕೊಳಗಾದ ಮಹಿಳೆಯರ ರಕ್ಷಣೆಗಾಗಿ ಮಹಿಳಾ
ಸಹಾಯವಾಣಿ ಕೇಂದ್ರವನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ. ಮಹಿಳಾ ಸಹಾಯವಾಣಿ ಸಂಖ್ಯೆ
೧೦೯೧ ಕ್ಕೆ ಕರೆ ಮಾಡಿ ಸಂಕಷ್ಟಕ್ಕೊಳಗಾದ ಮಹಿಳೆಯ ಬಗ್ಗೆ ಮಾಹಿತಿ ನೀಡಿದಲ್ಲಿ ಆದಷ್ಟು
ಶೀಘ್ರದಲ್ಲಿ ಆ ಮಹಿಳೆಯನ್ನು ಸಂಕಷ್ಟದಿಂದ ರಕ್ಷಿಸಲಾಗುವುದು ಎಂದು
ತಿಳಿಸಿದರು.        
     ಮಕ್ಕಳ ವಿಶೇಷ ಪೊಲೀಸ್ ಘಟಕದ ಬಸಪ್ಪ ಹಾದಿಮನಿ
ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ
ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಹಾಗೂ ಲೈಂಗಿಕ ದೌರ್ಜನ್ಯದಿಂದ ಮಕ್ಕಳ
ಸಂರಕ್ಷಣೆ ಕಾಯ್ದೆ ಕುರಿತು ಮಾಹಿತಿ ನೀಡಿದ ಅವರು,  ಮಕ್ಕಳ ಮೇಲಿನ ದೌರ್ಜನ್ಯ
ಪ್ರಕರಣಗಳನ್ನು ಕಡಿಮೆಗೊಳಿಸಲು ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕವನ್ನು ಜಿಲ್ಲಾ
ಪೊಲೀಸ್ ವರಿಷ್ಟಾಧಿಕಾರಿಗಳ ಕಛೇರಿಯಲ್ಲಿ ಸ್ಥಾಪಿಸಲಾಗಿದ್ದು, ಪೊಲೀಸ್ ಠಾಣೆಯ
ಠಾಣಾಧಿಕಾರಿಗಳನ್ನು ಮಕ್ಕಳ ಕಲ್ಯಾಣಾಧಿಕಾರಿಗಳೆಂದು ನೇಮಿಸಲಾಗಿದೆ. ಆರೈಕೆ ಮತ್ತು
ಪೋಷಣೆ ಅವಶ್ಯಕತೆಯಿರುವ ಯಾವುದೇ ಮಗುವನ್ನು ಯಾರೇ ವ್ಯಕ್ತಿಗಳು ಆರೈಕೆ ಮತ್ತು
ಪೋಷ
    
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರವಿಕುಮಾರ ಪವಾರ ಮಾತನಾಡಿ, ಮಕ್ಕಳ ರಕ್ಷಣೆಗಾಗಿ
ಸರ್ಕಾರವು  ಹಲವಾರು ಕಾನೂನು ಮತ್ತು ಯೋಜನೆಗಳನ್ನು ಜಾರಿಗೊಳಿಸಿದ್ದು, ಅದರಲ್ಲಿ ಸಮಗ್ರ
ಮಕ್ಕಳ ರಕ್ಷಣಾ ಯೋಜನೆಯು ಸಹ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಜಿಲ್ಲೆಯಲ್ಲಿಯು
ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಸ್ಥಾಪಿಸಲಾಗಿದ್ದು, ಇಂತಹ ಘಟಕದ ಅಡಿ ಪ್ರಾಯೋಜಕತ್ವ
ಹಾಗೂ ವಿಶೇಷ ಪಾಲನಾ ಯೋಜನೆಯನ್ನು ಜಾರಿಗೊಳಿಸಲಾಗಿದೆ.  ಸಂಕಷ್ಠಕೊಳಗಾದ ಮಕ್ಕಳ
ರಕ್ಷಣೆಗಾಗಿ ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ೧೦೯೮ ಗೆ
ದೂರವಾಣಿ ಕರೆ ಮಾಡುವ ಮೂಲಕ ಸಾರ್ವಜನಿಕರು ಸಂಕಷ್ಟಕ್ಕೊಳಗಾದ ಮಕ್ಕಳ ಬಗ್ಗೆ ಮಾಹಿತಿ
ನೀಡುವಂತೆ ಮನವಿ ಮಾಡಿದರು.  
     ಗ್ರಾಮ ಪಂಚಾಯತ್ ಅಧ್ಯಕ್ಷ ಡಿ.ಭಾಸ್ಕರ
ಸತ್ಯನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಲ್ಲಾಪುರ
ಗ್ರಾಮಪಂಚಾಯತ ಅಭಿವೃದ್ಧಿ ಅಧಿಕಾರಿ ಸುರೇಶ ಉಪ್ಪಾರ, ಕಾರ್ಯದರ್ಶಿ ಸುಶೀಲಮ್ಮ, ಕಿರಿಯ
ಮಹಿಳಾ ಆರೋಗ್ಯ ಸಹಾಯಕಿಯರಾದ ಸುಜಾತ, ಹಾಲಮ್ಮ ಸೇರಿದಂತೆ ಗ್ರಾಮದ ಅಂಗನವಾಡಿ
ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಣೆಗಾಗಿ ಮಕ್ಕಳ ವಿಶೇಷ ಘಟಕಕ್ಕೆ ಹಾಜರಪಡಿಸಬಹುದಾಗಿದೆ ಎಂದು ಮಾಹಿತಿ ನೀಡಿದರು. 

Please follow and like us:
error

Leave a Reply

error: Content is protected !!