೨೪ರಂದು ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ನಾಮಪತ್ರ ಸಲ್ಲಿಕೆ

ಶ್ರೀರಾಮುಲು ರವರ ನೇತೃತ್ವದಲ್ಲಿ ಬೃಹತ್ ಮೆರವಣಿಗೆ
ಕೊಪ್ಪಳ,ಮಾ,೨೧: ಈ ಬಾರಿ ಕಾಂಗ್ರೆಸ್ ಮುಕ್ತ ಭಾರತವನ್ನಾಗಿಸಲು ಮತ್ತು ಭವಿಷ್ಯದ ನಾಯಕ ಅಭಿವೃದ್ಧಿಯ ಹರಿಕಾರ ನರೇಂದ್ರ ಮೋದಿಯವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡಬೇಕೆಂದು ದೇಶದ ಯುವಕರ ಪಡೆಯೇ ಸಜ್ಜಾಗಿದ್ದು ಅದರಂತೆ ರಾಜ್ಯದಲ್ಲಿ ಕಳೆದ ಅವಧಿಯ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕೊಪ್ಪಳ ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡಿ ಬಿಜೆಪಿ ಸರ್ಕಾರ ಹೆಚ್ಚಿನ ಅನುದಾನ ನೀಡಿದ್ದರಿಂದ ಅನೇಕ ಜನಪರ ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇನೆ  ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಎಲ್ಲೆಡೆ ಹೆಚ್ಚಿನ  ಪ್ರಮಾಣದಲ್ಲಿ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಹೇಳಿದರು.
  ಈಗಾಗಲೇ ಲೋಕಸಭಾ ವ್ಯಾಪ್ತಿಯ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರದ ನಾಯಕರೊಂದಿಗೆ. ಪದಾಧಿಕಾರಿಗಳೊಂದಿಗೆ, ಕಾರ್ಯಕರ್ತರೊಂದಿಗೆ ಚುನಾವಣೆಯ ಕುರಿತು ಚರ್ಚಿಸಲಾಗಿದೆ ಇದೇ ದಿ.೨೪ ರಂದು ಬಿಜೆಪಿ ಪಕ್ಷದಿಂದ ನಾಮಪತ್ರ ಸಲ್ಲಿಕೆ ಮಾಡಲಾಗುತ್ತದೆ.
   ಮಾಜಿ ಸಚಿವರಾದ ಗೋವಿಂದ ಕಾರಜೋಳ ಮತ್ತು ಬಿ.ಶ್ರೀರಾಮುಲು ರವರ ನೇತೃತ್ವದಲ್ಲಿ ಕೊಪ್ಪಳ ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲಾಗುವುದು.
   ಅಂದು ಬೆಳಿಗ್ಗೆ ೯ ಘಂಟೆಗೆ ನಗರದ ವಿವಿಧ ದೇವಸ್ಥಾನಗಳಿಗೆ ಮತ್ತು ಮಸೀದಿಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಸಿರಸಪ್ಪಯ್ಯನ ಮಠದಿಂದ ಗಡಿಯಾರಕಂಬ, ಅಶೋಕವೃತ್ತ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಾಗುವುದು. 
   ಅಂದು ನಡೆಯುವ ಮೆರವಣಿಗೆಯಲ್ಲಿ ಮಾಜಿ ಸಚಿವರಾದ ವಿ.ಸೋಮಣ್ಣ, ಸುರೇಶಕುಮಾರ್, ಶಿವನಗೌಡ ನಾಯಕ್, ಸಂಸದರಾದ ಶಿವರಾಮೇಗೌಡ, ಮಾಜಿ ಸಂಸದರಾದ ಕೆ.ವಿರೂಪಾಕ್ಷಪ್ಪ, ವಿರೂಪಾಕ್ಷಪ್ಪ ಅಗಡಿ, ಶಾಸಕರಾದ ದೊಡ್ಡನಗೌಡ ಪಾಟೀಲ್, ಸೋಮಲಿಂಗಪ್ಪ ಸಿರಗುಪ್ಪಿ, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಸೇರಿದಂತೆ ಜಿಲ್ಲೆಯ ಬಿಜೆಪಿಯ ಎಲ್ಲಾ ಹಿರಿಯ ಮುಖಂಡರು, ಪದಾಧಿಕಾರಿಗಳು ಪಾಲ್ಗೊಳಲಿದ್ದಾರೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಲೋಕಸಭಾ ವ್ಯಾಪ್ತಿಯ ಎಲ್ಲಾ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಬಿಜೆಪಿ ಘಟಕ ತಿಳಿಸಿದೆ ಎಂದು ಮಾಧ್ಯಮದ ಸಹ ಪ್ರತಿನಿಧಿ ಪರಮಾನಂದ ಯಾಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Leave a Reply