ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪುಸ್ತಕ ಖರೀದಿ: ಅರ್ಜಿ ಆಹ್ವಾನ

ಕೊಪ್ಪಳ ಜೂ. ೨೮ : ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
೨೦೦೯ ನೇ ಸಾಲಿನಲ್ಲಿ ಪ್ರಥಮಾವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದ್ದು, ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಂದ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು- ೦೨ ಇವರಿಗೆ ಜುಲೈ ೨೦ ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: ೦೮೦- ೨೨೪೮೪೫೧೬ ಅಥವಾ ೨೨೧೦೭೭೦೪ ಕ್ಕೆ ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಬಿ.ಹೆಚ್. ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.

Please follow and like us:

Related posts

Leave a Comment