ಸೇತುವೆ ನಿರ್ಮಾಣ ಹಾಗೂ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಜು. ೧೧ ರಂದು ಶಂಕುಸ್ಥಾಪನೆ

ಕೊಪ್ಪಳ ಜು. ೧೦ (ಕ.ವಾ): ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯು ನಬಾರ್ಡ್ ಆರ್.ಐ.ಡಿ.ಎಫ್ ಯೋಜನೆಯಡಿ ಕವಲೂರು-ಮುರ್‍ಲಾಪುರ ರಸ್ತೆ ಕಿ.ಮೀ. ೫ ರಲ್ಲಿ ಸೇತುವೆ ನಿರ್ಮಾಣ ಹಾಗೂ ಕಲ್ಮಲಾ-ಶಿಗ್ಗಾಂವ ೨೩ ಕಿ.ಮೀ. ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆ ಕಾಮಗಾರಿಗಳ ಶಂಕುಸ್ಥಾಪನಾ ಸಮಾರಂಭ ಜು. ೧೧ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳ ತಾಲೂಕು ಕವಲೂರು ಗ್ರಾಮದಲ್ಲಿ ಆಯೋಜಿಸಲಾಗಿದೆ.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಅವರು ಶಂಕುಸ್ಥಾಪನೆ ನೆರವೇರಿಸುವರು. ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ. ಸೋಮಣ್ಣ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ, ಶಿವರಾಜ ಎಸ್ ತಂಗಡಗಿ, ಶಶಿಲ್ ನಮೋಶಿ, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಹಾಲಪ್ಪ ಆಚಾರ್, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಸೀತಾ ಹಲಗೇರಿ, ತಾಲೂಕಾ ಪಂಚಾಯತಿ ಅಧ್ಯಕ್ಷ ಅಮರೇಶ ಉಪಲಾಪುರ, ಉಪಾಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ, ಜಿಲ್ಲಾ ಪಂಚಾಯತಿ ಸದಸ್ಯರುಗಳಾದ ನಾಗನಗೌಡ ಮಾಲಿಪಾಟೀಲ, ಭಾಗೀರಥಿ ಶಂಕರಗೌಡ ಪಾಟೀಲ, ತಾಲೂಕಾ ಪಂಚಾಯತಿ ಸದಸ್ಯರುಗಳಾದ ಜ್ಯೋತಿ ಮಲ್ಲಿಕಾರ್ಜುನ, ಮುದ್ದಮ್ಮ ರಂಗಪ್ಪ ಕರಡಿ, ಹುಲಿಗೆವ್ವ ಹೊನ್ನಪ್ಪ, ವಿರೇಶ್ ಸಜ್ಜನ್, ಕೆ.ಬಿ. ಸಂಗಪ್ಪ ತಿಗರಿ ಸೇರಿದಂತೆ ಗಣ್ಯಾತಿಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Please follow and like us:
error