ಸ್ವರ್ಣಜಯಂತಿ ಶಹರಿ ರೋಜಗಾರ್ ಯೋಜನೆಯಡಿ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ನ. : ಕೊಪ್ಪಳ ನಗರಸಭೆಯ ಸ್ವರ್ಣಜಯಂತಿ ಶಹರಿ ರೋಜಗಾರ್ ಯೋಜನೆಯಡಿ ನಗರದ ಬಡತನ ರೇಖೆಗಿಂತ ಕೆಳಗಿರುವ ಅರ್ಹ ಅಭ್ಯರ್ಥಿಗಳಿಗೆ ವಿವಿಧ ಕೌಶಲ್ಯ ಅಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. 
ಕೊಪ್ಪಳ ನಗರಸಭೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಾದ ಸ್ವರ್ಣಜಯಂತಿ ಶಹರಿ ರೋಜಗಾರ್ ಯೋಜನೆಯಡಿಯಲ್ಲಿ ನಗರ ಪ್ರದೇಶದಲ್ಲಿರುವ ಅಭ್ಯರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಇಲಾಖೆಯ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕಾ ಸಂಸ್ಥೆಗಳೊಂದಿಗೆ ಮಾಹಿತಿ ತಂತ್ರಜ್ಞಾನ ಮತ್ತು ಇತರೇ ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಿದೆ.
ತರಬೇತಿಗಾಗಿ ೧೦ನೇ ತರಗತಿ ಪಾಸಾಗಿರಬೇಕು. ವಯೋಮಿತಿ ೧೮ ರಿಂದ ೩೫ ವರ್ಷದೊಳಗಿರಬೇಕು,  ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರಾಗಿರಬೇಕು. ಆಸಕ್ತರು ಅರ್ಜಿಯೊಂದಿಗೆ ವಿದ್ಯಾರ್ಹತೆಯ ಪ್ರಮಾಣ ಪತ್ರ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ, ೨ ಭಾವಚಿತ್ರಗಳ ದೃಢೀಕೃತ ದಾಖಲಾತಿ ಪ್ರತಿಗಳನ್ನು ಲಗತ್ತಿಸಿ ಸಲ್ಲಿಸಬೇಕು.  ನಿಗದಿತ ಅರ್ಜಿಯನ್ನು  ಕೊಪ್ಪಳ ನಗರಸಭೆ ಕಾರ್ಯಾಲಯದ ಸ್ವರ್ಣಜಯಂತಿ ಶಹರಿ ಯೋಜಗಾರ್ ಯೋಜನೆಯ ವಿಭಾಗದಿಂದ ಉಚಿತವಾಗಿ ಪಡೆದು ನ. ೩೦ ರೊಳಗಾಗಿ ಆಯುಕ್ತರು, ನಗರಸಭೆ ಸ್ವರ್ಣಜಯಂತಿ ಶಹರಿ ರೋಜಗಾರ್ ಯೋಜನೆಯ ವಿಭಾಗ, ಕೊಪ್ಪಳ ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Leave a Reply