ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ವಿತರಣೆ

  ಕೊಪ್ಪಳ ನಗರಸಭೆಯಿಂದ ನಗರದ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಗಾಗಿ ಅರ್ಹರಿಂದ ದಾಖಲಾತಿಗಳನ್ನು ಆಹ್ವಾನಿಸಲಾಗಿದೆ.
  ಪ್ರಸಕ್ತ ಸಾಲಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಬೀದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ವಿತರಿಸಲಾಗುತ್ತಿದ್ದು, ಬೀದಿ ಬದಿ ವ್ಯಾಪಾರಸ್ಥರು ತಮ್ಮ ಯಾದಿಯನ್ನು ಹಾಗೂ ಕುಟುಂಬ ಸದಸ್ಯರನ್ನೊಳಗೊಂಡ ಭಾವಚಿತ್ರವನ್ನು ನಗರಸಭೆಗೆ ಆ.೩೧ ರೊಳಗೆ ಸಲ್ಲಿಸಿ ಸಂಬಂಧಿಸಿದ ದಾಖಲಾತಿಗಳನ್ನು ಸಲ್ಲಿಸಬೇಕು.
ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಂಚಾರಿ ಹಾಗೂ ಸ್ಥಿರ ಬೀದಿ ವ್ಯಾಪಾರಸ್ಥರ ಸಮೀಕ್ಷೆಯನ್ನು ಈಗಾಗಲೇ ಪೂರ್ಣಗೊಳಿಸಲಾಗಿದ್ದು, ಈ ವ್ಯಾಪಾರಸ್ಥರಿಗೆ ಗುರುತಿನ ಚೀಟಿಯನ್ನು ವಿತರಿಸಬೇಕಾಗಿದ್ದು, ಆ.೩೧ ರೊಳಗಾಗಿ ನಗರಸಭೆ ಕಾರ್ಯಾಲಯಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
Please follow and like us:
error