fbpx

ಉಚಿತ ಬೇಸಿಗೆ ಶಿಬಿರ ಉದ್ಘಾಟನೆ

ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಂದೇ ಮಾತರಂ ಶಿಕ್ಷಣ ಸೇವಾ ಸಂಸ್ಥೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರದಂದು ಸುಧಾರಣಾ ಸಂಸ್ಥೆಗಳ ನಿವಾಸಿಗಳಿಗೆ ಆಯೋಜಿಸಿದ್ದ ಉಚಿತ ಬೇಸಿಗೆ ಶಿಬಿರದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ವಸಂತ ಪ್ರೇಮಾ ಅವರು ನೆರವೇರಿಸಿದರು.
ನಂತರ ಮಾತನಾಡಿದ ಅವರು, ಇಂದಿನ ದಿನಮಾನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಂಡಾಗ್ಯೂ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಕಂಡು ಬರುತ್ತಿವೆ. ಮಕ್ಕಳು ತಮ್ಮ ಸ್ವರಕ್ಷಣೆ ಹಾಗೂ ಆತ್ಮ ರಕ್ಷಣೆಗಾಗಿ ಸ್ವರಕ್ಷಣಾ ಕಲೆಗಳನ್ನು ಕಲಿಯುವುದು ಅವಶ್ಯಕವಾಗಿದೆ. ನಮ್ಮ ಸುಧಾರಣಾ ಸಂಸ್ಥೆಗಳ ನಿವಾಸಿಗಳಿಗೆ ಉಚಿತವಾಗಿ ಬೇಸಿಗೆ ಶಿಬಿರವನ್ನು ಆಯೋಜಿಸಿದ ಸ್ವರಕ್ಷಣಾ ಕಲೆಗಳೊಂದಿಗೆ ವ್ಯಕ್ತಿತ್ವ ವಿಕಸನ ಹಾಗೂ ನೃತ್ಯ ತರಬೇತಿಗಳನ್ನು ನೀಡುತ್ತಿರುವ ವಂದೇ ಮಾತರಂ ಶಿಕ್ಷಣ ಮತ್ತು ಸೇವಾ ಸಂಸ್ಥೆಯ ಕಾರ್ಯ ಶ್ಲಾಘನೀಯವಾದದ್ದು ಎಂದರು. ಅಲ್ಲದೇ ಮಕ್ಕಳಿಗೆ ಉಪಯುಕ್ತ ಕೌಶಲ್ಯಗಳನ್ನು ಕಲಿಸಲು ಮುಂದೆ ಬರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಇಲಾಖೆಯಿಂದ ಅಗತ್ಯ ನೆರವನ್ನು ನೀಡಲಾಗುವುದು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಗುಂಡಾಚಾರ‍್ಯ ಗಲಗಲಿಯವರು ಮಾತನಾಡಿ, ಪ್ರತಿ ವರ್ಷ ಈ ರೀತಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಿಸುವಂತೆ ತಿಳಿಸಿದರು. ಹಾಗೂ ಮಕ್ಕಳಿಗೆ ಭವಿಷ್ಯಕ್ಕೆ ಬೇಕಾದ ಭದ್ರ ಬುನಾದಿಯನ್ನು ನಾವು ಒಳ್ಳೆಯ ಜ್ಞಾನದಿಂದ ಮಾತ್ರ ಪಡೆಯಲು ಸಾಧ್ಯ. ಕರಾಟೆ, ಯೋಗಗಳು, ಮಕ್ಕಳ ಆರೋಗ್ಯ, ಆತ್ಮರಕ್ಷಣೆ ಮತ್ತು ಏಕಾಗ್ರತೆಯನ್ನು ಸಾಧಿಸಲು ಸಹಕಾರಿಯಾಗುತ್ತವೆ. ಈ ಶಿಬಿರವು ನಿಮ್ಮ ಜೀವನದಲ್ಲಿ ಮರೆಯಲಾಗದ ಅನುಭವವನ್ನು ಪಡೆಯಬೇಕೆಂದು ವಿವರಿಸಿದರು. 
  ವಂದೇ ಮಾತರಂ ಶಿಕ್ಷಣ ಮತ್ತು ಸೇವಾ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ಡಿ.ಎ.ರವರು ಈ ಶಿಬಿರದಲ್ಲಿ ಮಕ್ಕಳಿಗೆ ಸ್ವರಕ್ಷಣಾ ಕಲೆ ಮತ್ತು ಪಠ್ಯೇತರ ಚಟುವಟಿಕೆಗಳಾದ ಕರಾಟೆ, ಯೋಗ, ಸ್ಕೇಟಿಂಗ್, ಇತ್ಯಾದಿ ಸೃಜಾನಾತ್ಮಕ ಕಲೆಗಳನ್ನು ಮಕ್ಕಳಿಗೆ ಈ ಶಿಬಿರದಲ್ಲಿ ಕಲಿಸಲಾಗುತ್ತದೆ. ಶಿಬಿರಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆಯಬೇಕೆಂದು ವಿನಂತಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮುನಿರಾಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ರವಿಕುಮಾರ ಪವಾರ, ಸಿಂಧು ಯಲಿಗಾರ, ಬಾಲಕರ ಬಾಲಮಂದಿರ ಅಧೀಕ್ಷಕರಾದ ಇಮಾಲಪ್ಪ, ಆಪ್ತಸಮಾಲೋಚಕರಾದ ರವಿ, ಸಾವಿತ್ರಿ ಉಪಸ್ಥಿತರಿದ್ದರು. ದೀಪಾ ಸ್ವಾಗತಿಸಿದರು. ಮಂಜುಳಾ ನಿರೂಪಿಸಿದರು. ರವಿಕುಮಾರ ಪವಾರ ಕೊನೆಯಲ್ಲಿ ವಂದಿಸಿದರು.
Please follow and like us:
error

Leave a Reply

error: Content is protected !!