೧೦೦೦೦೧ನೇ ಶೌಚಾಲಯ ಉದ್ಘಾಟನೆ : ಫೆ.೦೧ ರಂದು ಪೂರ್ವಭಾವಿ ಸಭೆ

 

ಸ್ವಚ್ಛಭಾರತ ಅಭಿಯಾನ ಯೋಜನೆಯಡಿ ಜಿಲ್ಲೆಯಲ್ಲಿ ೧೦೧ ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳೆಂದು ಘೋಷಿಸಲು ಹಾಗೂ ೧೦೦೦೦೧ ನೇ ಶೌಚಾಲಯದ ಉದ್ಘಾಟನೆಗೆ ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಗೆ ಆಗಮಿಸುವ ಕಾರ್ಯಕ್ರಮ ಕುರಿತಂತೆ ಸಿದ್ಧತೆಗಳನ್ನು ಕೈಗೊಳ್ಳಲು ಫೆ.೦೧ ರಂದು ಸಾಯಂಕಾಲ ೪ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಪೂರ್ವಭಾವಿ ಸಭೆ ಹಾಗೂ ಕಾರ್ಯಾಗಾರ ಏರ್ಪಡಿಸಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಸಚಿವರಾದ ಎಚ್.ಕೆ.ಪಾಟೀಲ್ ಅವರು ವಹಿಸುವರು ಎಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ತಿಳಿಸಿದ್ದಾರೆ.

Leave a Reply