ಜಿಲ್ಲಾ ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ.

ಕೊಪ್ಪಳ-15- ತಾಲೂಕಿನ ಕುಣಕೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
    ಈ ಕ್ರೀಡಾಕೂಟದಲ್ಲಿ ಕುಣಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಖೋ ಖೋ ಸ್ಪರ್ಧೆಯಲ್ಲಿ  ಪ್ರಥಮ ಸ್ಥಾನ ವನ್ನು ಪಡೆದು ಕಲಬುರ್ಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಪೂಜಾರ, ದೈಹಿಕ ಶಿಕ್ಷಣಾಧಿಕಾರಿಗಳಾದ ಸುದರ್ಶನ ರಾವ್ ಮುಖ್ಯೋಪಾದ್ಯಾಯರಾದ ವೀರೇಶ ಅರಳಿಕಟ್ಟ್ಟಿ, ದೈಹಿಕ ಶಿಕ್ಷಕಿಯರಾದ ಸಾವಕ್ಕ ಹುಬ್ಬಳ್ಳಿ ಹಾಗೂ ಶಿಕ್ಷಕವೃಂ

ದದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply