ಪತ್ರಕರ್ತರ ಮೇಲೆ ಹಲ್ಲೆ ನಡೆಸಿದರೆ ಮೊಕದ್ದಮೆ

ಪ್ರತಿಭಟನೆ, ಚಳವಳಿ ಮುಂತಾದ ಘಟನೆಗಳ ವರದಿಗಾಗಿ ತೆರಳುವ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡುವ ಪೊಲೀಸರು ಮತ್ತು ಅರೆಸೇನಾ ಪಡೆಗಳ ವಿರುದ್ಧ ಭಾರತೀಯ ಪತ್ರಿಕಾ ಮಂಡಳಿಯು ಕ್ರಿಮಿನಲ್ ಪ್ರಕರಣ ದಾಖಲು ಮಾಡುತ್ತದೆ ಎಂದು ಮಂಡಳಿಯ ಅಧ್ಯಕ್ಷ ಮಾರ್ಕಂಡೇಯ ಕಟ್ಜು ಗುರುವಾರ ಎಚ್ಚರಿಕೆ ನೀಡಿದ್ದಾರೆ.
ಕರ್ತವ್ಯ ನಿರತ ಪತ್ರಕರ್ತರ ಮೇಲೆ ಯಾವುದೇ ರೀತಿಯ ಹಲ್ಲೆ ನಡೆಸದಂತೆ ಪೊಲೀಸರು ಮತ್ತು ಅರೆಸೇನಾ ಪಡೆಗಳಿಗೆ ಸ್ಪಷ್ಟ ಆದೇಶ ನೀಡಬೇಕು ಎಂದು ಕಟ್ಜು, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಈ ಪತ್ರದ ಪ್ರತಿಯನ್ನು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಳುಹಿಸಲಾಗಿದೆ.
Please follow and like us:
error