ಜ.೨೬ ರಂದು ಕೊಪ್ಪಳದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

  ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭ ಜ.೨೬ ರಂದು ಬೆಳಿಗ್ಗೆ ೯.೦೦ ಗಂಟೆಗೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.

 ಗಣರಾಜ್ಯೋತ್ಸ ದಿನಾಚರಣೆಯ ಅಂಗವಾಗಿ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಟಿ.ಜನಾರ್ಧನ ಹುಲಗಿ, ಸಂಸದ ಶಿವರಾಮಗೌಡ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ತಾ.ಪಂ.ಅಧ್ಯಕ್ಷ ಮುದೇಗೌಡ ನಿಂಗನಗೌಡ ಮಾಲಿ ಪಾಟೀಲ್, ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ ಅವರು ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನರಾಜ್ ಅವರು ತಿಳಿಸಿದ್ದಾರೆ.
 ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ ೮.೦೦ ಗಂಟೆಗೆ ವಿವಿಧ ಸ್ಥಬ್ದ ಚಿತ್ರಗಳ ಮೆರವಣಿಗೆಯು ಕೊಪ್ಪಳ ಮಿನಿ ವಿಧಾನಸೌಧ ಆವರಣದಿಂದ ಹೊರಟು, ಧ್ವಜಾರೋಹಣ ನಡೆಯುವ ಜಿಲ್ಲಾ ಕ್ರೀಡಾಂಗಣಕ್ಕೆ ತಲುಪಲಿದೆ. ಅಲ್ಲದೇ ಕ್ರೀಡಾಂಗಣದಲ್ಲಿ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ., ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಗೃಹರಕ್ಷಕ ದಳಗಳಿಂದ ಪಥ ಸಂಚಲನ ಮತ್ತು ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ಜರುಗಲಿದೆ. ಉತ್ತಮ ಸೇವೆ ಸಲ್ಲಿಸಿದ ರಾಜ್ಯ ಸರಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ,   ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.  ಅಲ್ಲದೇ ಅಂದು ಸಾಯಂಕಾಲ ೬.೦೦ ಗಂಟೆಯಿಂದ ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜ್ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಸಮೂಹ ನೃತ್ಯಗಳು, ಭರತನಾಟ್ಯ, ಜಾನಪದ ನೃತ್ಯ, ದೇಶಭಕ್ತಿ ಗೀತೆಗಳು ಹಾಗೂ ಸಮೂಹ ಗೀತೆಗಳು ಸೇರಿದಂತೆ ಅನೇಕ ಕಾರ್ಯಕ್ರಮಗಳು ಜರುಗಲಿವೆ.

Leave a Reply