You are here
Home > Koppal News > ಭಾಗ್ಯನಗರ ಗ್ರಾ.ಪಂ. ಆಡಳಿತಾಧಿಕಾರಿಯಾಗಿ ಕೃಷ್ಣಮೂರ್ತಿ ಅಧಿಕಾರ.

ಭಾಗ್ಯನಗರ ಗ್ರಾ.ಪಂ. ಆಡಳಿತಾಧಿಕಾರಿಯಾಗಿ ಕೃಷ್ಣಮೂರ್ತಿ ಅಧಿಕಾರ.

ಕೊಪ್ಪಳ ಜೂ. ೨೨ (ಕರ್ನಾಟಕ ವಾರ್ತೆ): ಭಾಗ್ಯನಗರ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಯಾಗಿ ಕೊಪ್ಪಳ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ ಅವರು ಸೋಮವಾರದಂದು ಅಧಿಕಾರ ವಹಿಸಿಕೊಂಡರು.  ಭಾಗ್ಯನಗರ ಗ್ರಾಮ ಪಂಚಾಯತಿಯ ಪದಾವಧಿಯು ಜೂ. ೧೬ ಕ್ಕೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಯನ್ನಾಗಿ ಕೊಪ್ಪಳ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯನ್ನು ನೇಮಿಸಿದ ಹಿನ್ನೆಲೆಯಲ್ಲಿ ಕೃಷ್ಣಮೂರ್ತಿ ಅವರು ಸೋಮವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Top