ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ನೇಮಕ : ಅರ್ಜಿ ಆಹ್ವಾನ

  ಕೊಪ್ಪಳ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ನೇಮಕಕ್ಕಾಗಿ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
 ಪ್ರಸ್ತುತ ಜಿಲ್ಲಾ ಸರ್ಕಾರಿ ವಕೀಲರ ಅವಧಿಯು ೨೦೧೫ ರ ಮಾ. ೦೭ ಕ್ಕೆ ಮುಕ್ತಾಯವಾಗಲಿದ್ದು, ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಮತ್ತು ಸೇವಾ ಷರತ್ತುಗಳ ನಿಯಮಗಳ ಅನ್ವಯ ಹುದ್ದೆ ಭರ್ತಿ ಮಾಡಲು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ.  ಹತ್ತು ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರು ತಮ್ಮ ಪೂರ್ಣ ವಯಕ್ತಿಕ ಹಾಗೂ ಸೇವಾ ವಿವರಗಳೊಂದಿಗೆ ಲಿಖಿತ ಅರ್ಜಿಯನ್ನು ದ್ವಿಪ್ರತಿಯಲ್ಲಿ ಜಿಲ್ಲಾಧಿಕಾರಿಗಳು, ಕೊಪ್ಪಳ ಇವರ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಫೆ. ೨೦ ರಂದು ಸಂಜೆ ೫-೩೦ ಗಂಟೆಯ ಒಳಗಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Please follow and like us:
error

Related posts

Leave a Comment