fbpx

ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸರ್ಕಾರದ ಆಸಕ್ತಿ- ಶರಣಪ್ರಕಾಶ್ ಪಾಟೀಲ್.

ಕೊಪ್ಪಳ ಆ. ೦೫ ರತಿಭಾವಂತ ಮತ್ತು ಬಡ ವಿದ್ಯಾರ್ಥಿಗಳಿಗೂ ವೈದ್ಯಕೀಯ ಶಿಕ್ಷಣದ ಅವಕಾಶ ಹೆಚ್ಚಿಸುವ ಉದ್ದೇಶದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿಯೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆನ್ನುವುದು ಸರ್ಕಾರದ ಆಶಯವಾಗಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು.
     ಕೊಪ್ಪಳ ನಗರದಲ್ಲಿ ನೂತನವಾಗಿ ಪ್ರಾರಂಭವಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಬುಧವಾರದಂದು ಭೇಟಿ ನೀಡಿ, ಇದೇ ವರ್ಷ ಕಾಲೇಜಿನಲ್ಲಿ ಪ್ರವೇಶ ಪಡೆದಿರುವ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳ ಜೊತೆ ಕುಂದುಕೊರತೆಗಳ ಬಗ್ಗೆ ವಿಚಾರಣೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
     ಈ ವರ್ಷ ಕೊಪ್ಪಳ, ಕಲಬುರಗಿ ಮತ್ತು ಗದಗ ಜಿಲ್ಲೆಗಳಲ್ಲಿ ನೂತನವಾಗಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭವಾಗಿರುವುದರಿಂದ, ರಾಜ್ಯಕ್ಕೆ ೪೫೦ ಮೆಡಿಕಲ್ ಸೀ

ಟುಗಳು ಹೆಚ್ಚುವರಿಯಾಗಿ ಲಭ್ಯವಾದಂತಾಗಿದೆ.  ಮುಂದಿನ ವರ್ಷದಿಂದ ರಾಜ್ಯದ ಕೊಡಗು, ಚಾಮರಾಜನಗರ ಮತ್ತು ಕಾರವಾರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಪ್ರಾರಂಭವಾಗಲಿವೆ.  ರಾಜ್ಯದಲ್ಲಿ ಸಾಕಷ್ಟು ಖಾಸಗಿ ವೈದ್ಯಕೀಯ ಕಾಲೇಜುಗಳಿವೆಯಾದರೂ, ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಔಚಿತ್ಯದ ಬಗ್ಗೆ ಹಲವರಿಂದ ಪ್ರಶ್ನೆಗಳು ಕೇಳಿ ಬಂದಿದ್ದವು.  ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ.  ಆದರೆ ಉನ್ನತ ವ್ಯಾಸಂಗದ ಅವಕಾಶ ಕೊರತೆಯಿಂದ, ಬಡವರು ಮತ್ತು ಮಧ್ಯಮ ವರ್ಗದ ಪ್ರತಿಭಾವಂತರು ವಂಚಿತರಾಗುತ್ತಿದ್ದಾರೆ.  ಎಲ್ಲ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಒಳ್ಳೆಯ ವೈದ್ಯಕೀಯ ಶಿಕ್ಷಣ ದೊರಕಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ.  ಜಿಲ್ಲಾ ಮಟ್ಟದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭ ಮಾಡುವುದರಿಂದ, ಆ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಅವಕಾಶ ದೊರಕುವುದರ ಜೊತೆಗೆ, ಬಡ ಜನರಿಗೆ ಜಿಲ್ಲಾ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರಿಂದ ಗುಣಮಟ್ಟದ ಚಿಕಿತ್ಸೆ ಲಭಿಸಲಿದೆ ಅಲ್ಲದೆ ವೈದ್ಯರ ಕೊರತೆ ನೀಗಲಿದೆ.  ಸದ್ಯ ಕೊಪ್ಪಳ ಮೆಡಿಕಲ್ ಕಾಲೇಜಿಗೆ ಬೋಧಕ ಸಿಬ್ಬಂದಿಗಳ ನೇಮಕಾತಿಯಾಗಿದ್ದು, ಉಳಿದಂತೆ ಎಲ್ಲ ಹುದ್ದೆಗಳ ನೇಮಕಕ್ಕೂ ಈಗಾಗಲೆ ಕ್ರಮ ಕೈಗೊಳ್ಳಲಾಗಿದೆ.  ಸಿಬ್ಬಂದಿಗಳ ನೇಮಕಾತಿಗೆ ಯಾವುದೇ ಅಡ್ಡಿ ಇಲ್ಲ.  ಕೊಪ್ಪಳದ ಜಿಲ್ಲಾ ಆಸ್ಪತ್ರೆಯಲ್ಲಿಯೂ ಉತ್ತಮ ಸೌಲಭ್ಯ ದೊರಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಹೇಳಿದರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಕಿಮ್ಸ್ ನಿರ್ದೇಶಕ ಡಾ. ಶ್ರೀನಿವಾಸ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದ್ರಿ ಸೇರಿದಂತೆ ಮೆಡಿಕಲ್ ಕಾಲೇಜಿನ ಡಾ. ಸುಮತಿ, ಡಾ. ಇಟಗಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Please follow and like us:
error

Leave a Reply

error: Content is protected !!