ಲಘು ವಾಹನ ಚಾಲನಾ ತರಬೇತಿ ಅರ್ಜಿ ಆಹ್ವಾನ.

ಕೊಪ್ಪಳ, ಸೆ.೨೯ (ಕ ವಾ) ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯದ ವತಿಯಿಂದ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ರಾಜ್ಯ ಯೋಜನೆಯಡಿ ಯಲಬುರ್ಗಾ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ನಿರುದ್ಯೋಗಿಗಳಿಗೆ ಲಘುವಾಹನ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
     ಅರ್ಜಿಗಳನ್ನು ಯಲಬುರ್ಗಾ ಪಟ್ಟಣ ಪಂಚಾಯತ್ ಕಾರ್ಯಾಲಯದ ವಿಷಯ ನಿರ್ವಾಹಕರಿಂದ ಪಡೆಯಬಹುದಾಗಿದ್ದು, ಅಕ್ಟೋಬರ್ ೧೪ ಅರ್ಜಿ ವಿತರಿಸುವ ಕೊನೆ ದಿನಾಂಕವಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರ, ಮತದಾರರ ಭಾವಚಿತ್ರ ಇರುವ ಗುರುತಿನ ಚೀಟಿ ಅಥವಾ ಆಧಾರ್‌ಕಾರ್ಡ್, ಬಿಪಿಎಲ್ ರೇಷನ್ ಕಾರ್ಡ್, ಒಂದು ಭಾವಚಿತ್ರ ಇತ್ಯಾದಿ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಲಗತ್ತಿಸಿ, ಸಲ್ಲಿಸಬಹುದಾಗಿದೆ. ಅಕ್ಟೋಬರ್ ೧೫ ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದ್ದು, ತಡವಾಗಿ ಬಂದತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ವಿಷಯ ನಿರ್ವಾಹಕರನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

Please follow and like us:
error