ಕಸಾಪ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖಪಾಟೀಲ;ಕೆಜೆಪಿ ಸೇರ್ಪಡೆ

 ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಹಾಗೂ ಬಂಡಾಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) ಅವರು, ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ಕರ್ನಾಟಕ ಜನತಾ ಪಕ್ಷಕ್ಕೆ ವಿದ್ಯುಕ್ತವಾಗಿ ಸೇರ್ಪಡೆಗೊಳ್ಳುವ ಮೂಲಕ ಸಾಹಿತ್ಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ನಗರದ ಡಾಲರ್ಸ್‌ ಕಾಲನಿಯಲ್ಲಿ ಬಿಎಸ್‌ವೈ ಅವರ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ಪ್ರೊ.ಚಂಪಾ ಕೆಜೆಪಿ ಸೇರ್ಪಡೆಗೊಂಡರು. ಬಿ.ಎಸ್.ಯಡಿಯೂರಪ್ಪ, ಪ್ರೊ.ಚಂದ್ರಶೇಖರ ಪಾಟೀಲ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡದರು.
ಕೋಮುವಾದಿ ವಿರೋಧಿ ಪಕ್ಷ: ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಪ್ರೊ.ಚಂಪಾ, ಕೋಮುವಾದಿ ವಿರೋಧಿ, ಜಾತ್ಯತೀತ ನಿಲುವುಳ್ಳ ಪ್ರಬಲ ಪ್ರಾದೇಶಿಕ ಪಕ್ಷ ರಾಜ್ಯಕ್ಕೆ ಅಗತ್ಯವಿದೆ. ಆ ಹಿನ್ನೆಲೆಯಲ್ಲಿ ತಾನು ಕರ್ನಾಟಕ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದು ತಿಳಿಸಿದರು.
 ಕೆಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡಿದ್ದು, ನಾಳೆಯಿಂದಲೇ ನನ್ನ ಮಿತಿಯಲ್ಲೆ ಪಕ್ಷ ಸಂಘಟನೆಗೆ ಪ್ರಚಾರ ಕೈಗೊಳ್ಳುವೆ. ಕೇಂದ್ರದ ಮುಂದೆ ನಮ್ಮ ಬೇಡಿಕೆಗಳನ್ನು ಮಂಡಿಸಲು ಪ್ರಬಲ ಪ್ರಾದೇಶಿಕ ಪಕ್ಷ ಅಗತ್ಯ. ಕೋಮುವಾದಿ ವಿರೋಧಿ ಶಕ್ತಿಗಳು ಹಾಗೂ ಜಾತ್ಯತೀಯ ಮನೋಭಾವನೆಯುಳ್ಳ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎಂದು ಚಂಪಾ ಹೇಳಿದರು.
Please follow and like us:
error