fbpx

ಮಾ.೧೮ ರಂದು ಮಾನವ ಹಕ್ಕುಗಳ ಅರಿವು ಹಾಗೂ ಜಾಗೃತಿ ಕಾರ್ಯಾಗಾರ

  ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಮಾನವ ಹಕ್ಕುಗಳ ಅರಿವು ಹಾಗೂ ಜಾಗೃತಿ ಮೂಡಿಸುವ ಕುರಿತು ಕಾರ್ಯಾಗಾರ ಮಾ.೧೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.
  ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್,  ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ್, ಅಮರನಾಥ ಪಾಟೀಲ್, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ,  ತುಂಗಭದ್ರಾ ಕಾಡಾ ಅಧ್ಯಕ್ಷ ಎ.ವಸಂತಕುಮಾರ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲಕುಮಾರ, ಜಿಲ್ಲಾ ಸತ್ರ ನ್ಯಾಯಾಧೀಶ ಬಸವರಾಜ ಸಪ್ಪಣ್ಣವರ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ,  ತಾಲೂಕಾ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ವಿ.ಮಾಲಿಪಾಟೀಲ್, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
Please follow and like us:
error

Leave a Reply

error: Content is protected !!