ವಾಲ್ಮೀಕಿ ಜಯಂತಿ : ಅ. ೧೮ ರಂದು ಪೂರ್ವಭಾವಿ ಸಭೆ

ಕೊಪ್ಪಳ ಅ. : ಸರ್ಕಾರದ ನಿರ್ದೇಶನದಂತೆ ಮರ್ಹ ಶ್ರೀ ವಾಲ್ಮೀಕಿ ಜಯಂತಿಯನ್ನು ಅ. ೨೨ ರಂದು ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಚರಿಸುವ ಕುರಿತು ಪೂರ್ವಭಾವಿ ಸಭೆ ಅ. ೧೮ ರಂದು ಸಂಜೆ ೦೪ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ವಹಿಸುವರು. ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕ ಪ್ರತಿನಿಧಿಗಳು ಈ ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Please follow and like us:
error