ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ಆಹ್ವಾನ.

ಕೊಪ್ಪಳ, ಆ.೨೧
(ಕ ವಾ) ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ
ಕೊಪ್ಪಳ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಡಿ ವಿವಿಧ ಕಾರಣಗಳಿಂದ ಖಾಲಿ ಇರುವ ೦೧
ಅಂಗನವಾಡಿ ಕಾರ್ಯಕರ್ತೆ ಹಾಗೂ ೦೪ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ
ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
          ತಾಲೂಕಿನ ಕವಳಿ
ಗ್ರಾಮದಲ್ಲಿ ಖಾಲಿ ಇರುವ ೦೧ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ ಶಹಪುರ,
ಬೂದಿಹಾಳ, ಗೋಸಲದೊಡ್ಡಿ ಮತ್ತು ಕೆಂಚನದೋಣಿ ಗ್ರಾಮಗಳಲ್ಲಿ ಖಾಲಿ ಇರುವ ತಲಾ ೦೧
ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ
ಸಲ್ಲಿಸಬಹುದಾಗಿದ್ದು,  ಸೆಪ್ಟಂಬರ್.೧೪ ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಕೊಪ್ಪಳ ಇವರನ್ನು
ಸಂಪರ್ಕಿಸಬಹುದಾಗಿದೆ.
Please follow and like us:

Related posts

Leave a Comment