ಗೌರವಧನ ಅ. ೨೮ ರ ಸಭೆಯಲ್ಲಿ ಮಾಹಿತಿ ಸಲ್ಲಿಸಲು ಸೂಚನೆ.

ಕೊಪ್ಪಳ, ಅ.೨೧ (ಕ ವಾ) ಕರ್ನಾಟಕ ರಾಜ್ಯ ವಕ್ಫ್ ಮಂಡಳಿ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಾರ್ಯಾಲಯ, ಕೊಪ್ಪಳ ಇವರಿಂದ, ಗೌರವಧನಕ್ಕೆ ಸಂಬಂಧಪಟ್ಟಂತೆ ಕೊಪ್ಪಳ ಜಿಲ್ಲೆಯ ಎಲ್ಲಾ ಮಸ್ಜೀದ್‌ಗಳ ಪೇಶ್ ಇಮಾಮ್ ಮತ್ತು ಮೌಜ್ಜನರು ಅ.೨೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿರುವ ಸಭೆಗೆ ಹಾಜರಾಗಿ ಮಾಹಿತಿ ಸಲ್ಲಿಸುವಂತೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.
     ಈಗಾಗಲೇ ಪೇಶ್ ಇಮಾಮ್ ಮತ್ತು ಮೌಜ್ಜನರಿಗೆ ಸರ್ಕಾರದಿಂದ ನೀಡಲಾಗುತ್ತಿರುವ  ಗೌರವಧನವನ್ನು ಇಲ್ಲಿಯವರೆಗೂ ಪಡೆಯದೇ ಇರುವವರು, ಬೇರೆಯವರ ಹೆಸರಿನ ಖಾತೆಗೆ ಗೌರವಧನ ಜಮಾ ಆದವರು ಹಾಗೂ ಗೌರವಧನ ಪಡೆಯಲು ಅರ್ಜಿ ಸಲ್ಲಿಸಲಿಚ್ಚಿಸುವವರು ತಮ್ಮ ಬ್ಯಾಂಕ್ ಖಾತೆಯ ವಿವರ, ಭರ್ತಿ ಮಾಡಿದ ಅರ್ಜಿ ಇತ್ಯಾದಿ ದಾಖಲೆಗಳೊಂದಿಗೆ ಅ.೨೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿರುವ ಸಭೆಗೆ ಹಾಜರಾಗಿ ಮಾಹಿತಿ ಸಲ್ಲಿಸಬಹುದಾಗಿದೆ. ಅಲ್ಲದೆ ಸಭೆಯಲ್ಲಿ ಪ್ರಧಾನಮಂತ್ರಿ ಪಿಂಚಣಿ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದ್ದು, ಯೋಜನೆಯ ಲಾಭ ಪಡೆಯಲಿಚ್ಛಿಸುವವರು ಸಭೆಗೆ ಹಾಜರಾಗಿ ಸದುಪಯೋಗ ಪಡೆದುಕೊಳ್ಳುವಂತೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.
ಭಾರಿ ವಾಹನ ಚಾಲನಾ ತರಬೇತಿ ಅರ್ಜಿ ಆಹ್ವಾನ.
ಕೊಪ್ಪಳ, ಅ.೨೧ (ಕ ವಾ) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕೌಶಲ್ಯ ಕಾರ್ಯಕ್ರಮದಡಿ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ನಿರುದ್ಯೋಗಿ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
     ಆಯ್ಕೆಗೊಳ್ಳುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿವಿಧ ಸಂಸ್ಥೆಗಳ ಮೂಲಕ ಬೆಂಗಳೂರು, ಮಳವಳ್ಳಿ, ಹಾಸನ, ಹುಮನಾಬಾದ್, ಹಗರಿಬೊಮ್ಮನಹಳ್ಳಿ ಮತ್ತು ಹುಬ್ಬಳ್ಳಿಯಲ್ಲಿ ತರಬೇತಿ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿದ್ದು, ತರಬೇತಿ ಭತ್ಯೆ ನೀಡಲಾಗುವುದು. ಆಸಕ್ತ ಪ್ರವರ್ಗ-೦೧, ೨ಎ, ೩ಎ ಹಾಗೂ ೩ಬಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಪಡೆದು, ಭರ್ತಿ ಮಾಡಿ, ನವೆಂಬರ್ ೦೯ ರೊಳಗಾಗಿ ಅದೇ ಕಛೇರಿಗೆ ಸಲ್ಲಿಸಬಹುದಾಗಿದೆ.
ಅ.೨೨ ರಂದು ಮೋರನಾಳದಲ್ಲಿ ನಾಟಕ ಪ್ರದರ್ಶನ.
ಕೊಪ್ಪಳ, ಅ.೨೧ (ಕ ವಾ) ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ಹಾಗೂ ಶ್ರೀ ಮಾರುತೇಶ್ವರ ಭಜನಾ ಸಂಘ, ಮೋರನಾಳ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ದೇವಿ ಮಹಾತ್ಮೆ ನಾಟಕ ಪ್ರದರ್ಶನವನ್ನು ಅ.೨೧ ರಂದು ರಾತ್ರಿ ೧೦.೨೫ ಗಂಟೆಗೆ ತಾಲೂಕಿನ ಮೋರನಾಳ ಗ್ರಾಮದಲ್ಲಿ ಏರ್ಪಡಿಸಲಾಗಿದೆ.
     ಶಾಸಕ ಕೆ.ರಾಘವೇಂದ್ರ ಹಿಟ್ನಾಳ ನಾಟಕ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಸಂಸದ ಸಂಗಣ್ಣ ಕರಡಿ ಜ್ಯೋತಿ ಬೆಳಗಿಸುವರು. ಬೆಟಗೇರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹನುಮಮ್ಮ ಬಿ.ಕಂಬಳಿ ಅಧ್ಯಕ್ಷತೆ ವಹಿಸಲಿದ್ದು, ಗ್ರಾಮ ಪಂಚಾಯತ್ ಸದಸ್ಯ ದ್ಯಾಮಣ್ಣ ನೀರಲಗಿ, ಅಂದಪ್ಪ ಚಿಲಗೋಡ, ದೇವಕ್ಕ ಮಾಗಳದ, ಭರಮಣ್ಣ ಭಾವಿ, ಹನುಮವ್ವ ಹಾರನಹಳ್ಳಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿ.ಕೊಟ್ರಪ್ಪ ತಿಳಿಸಿದ್ದಾರೆ.
Please follow and like us:
error