ಡಿ. ೨೧ ರಂದು ವಿಶ್ವ ವಿಕಲಚೇತನರ ದಿನಾಚರಣೆ

: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವಜನ ಸೇವಾ ಇಲಾಖೆ, ನಗರಾಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಡಿ. ೨೧ ರಂದು ಕೊಪ್ಪಳದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಕ್ರೀಡಾ ಕೂಟ ಹಮ್ಮಿಕೊಳ್ಳಲಾಗಿದೆ.
  ಕಾರ್ಯಕ್ರಮದ ಅಂಗವಾಗಿ ಡಿ. ೨೧ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಸಾರ್ವಜನಿಕ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ.  ಅಂದು ಮಧ್ಯಾಹ್ನ ೩-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.  ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಾಜ್ಯ ಸಹಕಾರ ಮತ್ತು ಕೃಷಿ  ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ನೆರವೇರಿಸುವರು.  ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.  ಮುಖ್ಯ ಅತಿಥಿಗಳಾಗಿ ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ್ ವಲ್ಲ್ಯಾಪುರ, ರಾಜ್ಯ ಕರಕುಶಲ ಅಬಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈ-ಕ ಪ್ರದೇಶಾಭಿವೃಧ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಈಶಣ್ಣ ಗುಳಗಣ್ಣವರ್, ಪರಣ್ಣ ಮುನವಳ್ಳಿ, ಶಿವರಾಜ ತಂಗಡಗಿ, ವಿಧಾನಪರಿಷತ್ ಸದಸ್ಯರುಗಳಾದ ಶಶಿಲ್ ನಮೋಶಿ, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಹಾಲಪ್ಪ ಆಚಾರ್, ಜಿ.ಪಂ. ಉಪಾಧ್ಯಕ್ಷೆ ಸೀತಾ ಹಲಗೇರಿ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ತಾ.ಪಂ. ಅಧ್ಯಕ್ಷ ಅಮರೇಶ ಉಪಲಾಪುರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿಲ್ಲಾ ವಿಕಲಚೇತನರ ಒಕ್ಕೂಟದ ಗೌರವಾಧ್ಯಕ್ಷ ಪ್ರತಾಪ ನವಲಿ ಹಿರೇಮಠ, ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರ, ಜಂಟಿಕಾರ್ಯದರ್ಶಿ ವಿರೂಪಾಕ್ಷಪ್ಪ ತಳಕಲ್ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸುವರು.
Please follow and like us:
error