ಖಾಸಗಿ ಚಾನಲ್‌ಗಳ ಮೇಲ್ವಿಚಾರಣೆಗೆ ಜಿಲ್ಲಾ ಮಟ್ಟದ ಸಮಿತಿ ರಚನೆ

ಕೊಪ್ಪಳ ಮೇ. : ಭಾರತ ಸರ್ಕಾರದ ಆದೇಶದ ಮೇರೆಗೆ ಖಾಸಗಿ ಟೆಲಿವಿಷನ್ ಚಾನಲ್‌ಗಳ ಮೇಲ್ವಿಚಾರಣೆ ಕುರಿತಂತೆ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಆದೇಶ ಹೊರಡಿಸಿದ್ದಾರೆ.
ಖಾಸಗಿ ಟೆಲಿವಿಷನ್ ಚಾನಲ್‌ಗಳ ಮೇಲ್ಚಿಚಾರಣೆಯ ಜಿಲ್ಲಾ ಮಟ್ಟದ ಸಮಿತಿಗೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿರುತ್ತಾರೆ. ಉಳಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಕೊಪ್ಪಳದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಚಾರ್ಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸದಸ್ಯರಾಗಿರುತ್ತಾರೆ. ಅಲ್ಲದೆ ಕೊಪ್ಪಳದ ಸಮಾಜ ಸೇವಕಿ ಹಾಗೂ ಮಹಿಳಾ ಮಂಡಳದ ಅಧ್ಯಕ್ಷೆ ಸಾವಿತ್ರಿ ಮುಜುಂದಾರ್, ಸಾಮಾಜಿಕ ಕಾರ್ಯಕರ್ತ ಕೆ. ವಾಸುದೇವ ಅವರು ಸಹ ಸದಸ್ಯರಾಗಿದ್ದು, ಜಿಲ್ಲಾ ವಾರ್ತಾಧಿಕಾರಿಗಳು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಿದೆ.

Please follow and like us:
error