fbpx

ಸಮಾನತೆಯ ದೃಷ್ಠಿಯಿಂದ ಸರಕಾರ ಸಮೀಕ್ಷಾ ಕಾರ್ಯ ಕೈಗೊಂಡಿದೆ- ಬಾಳಪ್ಪ ಬಾರಕೇರ

 : ಸಾಮಾಜಿಕ ನ್ಯಾಯವನ್ನು ಎಲ್ಲ ವರ್ಗದವರಿಗೂ ನೀಡುವ ಆಕಾಂಕ್ಷೆ ಸರ್ಕಾರದ್ದಾಗಿದ್ದು, ಸಮಾನತೆ ಪರಿಕಲ್ಪನೆಯ ದೃಷ್ಠಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಕೈಗೊಂಡಿದೆ ಎಂದು ಕೊಪ್ಪಳ ನಗರಸಭೆ ಉಪಾಧ್ಯಕ್ಷ ಬಾಳಪ್ಪ ಬಾರಕೇರ ಹೇಳಿದರು. 
  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ನೇಮಕಗೊಂಡಿರುವ ಗಣತಿದಾರರು ಹಾಗೂ ಮೇಲ್ವಿಚಾರಕರಿಗಾಗಿ  ನಗರದ ಸಾಹಿತ್ಯ ಭವನದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅವರು ಮಾತನಾಡಿದರು. 
  ಗುಣಮಟ್ಟದ ಸಮೀಕ್ಷೆಗಾಗಿ ಸರಕಾರ ಸಮಾಜದ ಗೌರವಾನ್ವಿತ ಹುದ್ದೆಯಲ್ಲಿರುವ ಶಿಕ್ಷಕರನ್ನು ಆಯ್ಕೆಮಾಡಿಕೊಂಡಿದೆ.  ವಾಸ್ತವಿಕ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಸಮಾಜದ ಏಳಿಗೆಗೆ ಕಾರ್ಯಕ್ರಮ ರೂಪಿಸುವ ಉದ್ದೇಶದಿಂದ ಸರ್ಕಾರ ಇಂತಹ ಸಮೀಕ್ಷೆಗೆ ಮುಂದಾಗಿರುವುದು ಸ್ವಾಗತಾರ್ಹ.  ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಬಾಳಪ್ಪ ಬಾರಕೇರ ಮನವಿ ಮಾಡಿದರು.
  ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಥಮ ಹಂತದ ತರಬೇತಿ ಕಾರ್ಯಕ್ರಮವನ್ನು  ಪ್ರಾರಂಭಿಸಿದ್ದು, ಗಣತಿಗೆ ನೇಮಕಗೊಂಡಿರುವ ಶಿಕ್ಷಕರು ಪ್ರಮುಖ ಪಾತ್ರ ವಹಿಸುವ ಮೂಲಕ ನಿಖರ ಮಾಹಿತಿ ಸಂಗ್ರಹಿಸಬೇಕು ಎಂದರು.
  ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ ಕಾರ್ಯಕ್ರಮ ಉದ್ಘಾಟಿಸಿದರು.   ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಕಲ್ಲೇಶ, ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಿ.ವಿ. ಜಡಿಯವರ, ಮಾಸ್ಟರ್ ಟ್ರೈನರ್ ಚನ್ನಬಸಪ್ಪ ಹಮ್ಮಗಿ, ರಾಮಣ್ಣ ಚಲುವಾದಿ ಹಾಗೂ ಶಿಕ್ಷಕರು ಇದ್ದರು. 
Please follow and like us:
error

Leave a Reply

error: Content is protected !!