ದೇಶಕ್ಕೆ ಮಕ್ಕಳೇ ಬೆನ್ನೆಲುಬು ಅವರ ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಕಾಂತ ದಾ ಬಬಲಾದಿ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಿನೀಯರ್ ಸಿವಿಲ್ ಜಡ್ಜ್ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ ಚಗರಡ್ಡಿ, ಸಿವಿಲ್ ಜಡ್ಜ್ ಹಾಗೂ ಜೆ.ಎಂ.ಎಫ್.ಸಿ.ಯ ಕಾವೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಕೆ.ಅಣ್ಣಿಗೇರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ, ಜಿಲ್ಲಾ ಸರ್ಕಾರಿ ವಕೀಲರಾದ ವಿ.ಎಂ.ಭೂಸನೂರಮಠ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೊಪ್ಪಳ ವಿಭಾಗೀಯ ನಿಯಂತ್ರಣಾ
ಧಿಕಾರಿ ಪಿ.ಮಿನುಲ್ಲಾ ಸಾಹೇಬ ಸೇರಿದಂತೆ ಅನೇಕರು ಆಗಮಿಸಿದ್ದರು.
ಉಪನ್ಯಾಸಕರಾಗಿ ಆಗಮಿಸಿದ ಯೂನಿಸೆಫ್ನ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ತರಬೇತಿ ಸಂಯೋಜಕ ಹರೀಶ ಜೋಗಿ ಅವರು ಮಾತನಾಡಿ, ಬಾಲಕಾರ್ಮಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಬಂದಿದೆ ಎಂಬ ವಿಷಯವನ್ನು ತಿಳಿಸಿದ ಅವರು, ಜಿಲ್ಲೆಯಲ್ಲಿ ೬ ಲಕ್ಷ ಜನಸಂಖ್ಯೆಯಲ್ಲಿ ೧ ಲಕ್ಷ ಅಂಗವಿಕಲರು ಇರುವುದರ ಬಗ್ಗೆ ಸಂತಾಪ ವ್ಯಕ್ತಪಡಿಸಿದರಲ್ಲದೇ ಮಕ್ಕಳಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ತಿಳಿಸಿದರು. ವಕೀಲರಾದ ವೆಂಕಟೇಶ ಗಮನಿ, ಗಂಗಾವತಿ ವೃತ್ತದ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕಿ ಭುವನೇಶ್ವರಿ ಕೋಟಿಮಠ, ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ್ರ ವಿವಿಧ ವಿಷಯಗಳ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕ್ಷೇತ್ರಾಧಿಕಾರಿಯಾದ ಮಾರುತಿ ನಾಯ್ಕರ್ ಅವರು ಕಾರ್ಯಕ್ರಮದ ವಂದನಾರ್ಪಣೆ ಮಾಡಿದರು. ಕೊನೆಯಲ್ಲಿ ಜಿಲ್ಲಾ ಬಾಲಕಾರ್ಮಿಕ ವಿಶೇಷ ವಸತಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡಿಸಲಾಯಿತು. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡರ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲೆಯ ವಿವಿಧ ಬಾಲಕಾರ್ಮಿಕ ವಿಶೇಷ ವಸತಿ ಶಾಲಾ ವಿದ್ಯಾರ್ಥಿಗಳಿಂದ ಬೆಳಿಗ್ಗೆ ಬಾಲಕಾರ್ಮಿಕ ಪದ್ಧತಿ ವಿರುದ್ಧ ಘೋಷಣೆ ಕೂಗುತ್ತಾ ಜನಜಾಗೃತಿ ಜಾಥಾ ಕಾರ್ಯಕ್ರಮವನ್ನು ತಹಶೀಲ್ದಾರ ಕಛೇರಿಯಿಂದ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ ಕೇಂದ್ರಿಯ ಬಸ್ ನಿಲ್ದಾಣದ ಆವರಣವನ್ನು ತಲುಪಲಾಯಿತು.
Please follow and like us: