ಅಮೀನಪುರ ಚರಂಡಿ ನಿರ್ಮಾಣಕ್ಕೆ ವಿರೋಧ


ಅಮೀನಪುರದಲ್ಲಿ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ಚರಂಡಿ ನಿರ್ಮಿಸಲು ನಿರ್ಮಿತಿ ಕೇಂದ್ರದ ಸಿಬ್ಬಂದಿಗಳು ಮುಂದಾದಾಗ ಅಮೀನಪುರದ ನಿವಾಸಿಗಳು ಅದನ್ನು ವಿರೋಧಿಸಿದ್ದರಿಂದ ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಕೋರ್ಟಿನಲ್ಲಿ ಕೇಸು ನಡೆಯುತ್ತಿರುವುದರಿಂದ ಇಲ್ಲಿ ಚರಂಡಿ ನಿರ್ಮಿಸಲು ಅವಕಾಶ ನೀಡುವುದಿಲ್ಲ ಎನ್ನುವುದು ಅವರ ವಾದವಾಗಿತ್ತು. ತಹಶೀಲ್ದಾರ ಬಿ.ಎಲ್.ಘೋಟೆ, ಪ್ರಭಾರ ಪೌರಾಯುಕ್ತ ಆನಂದ ಕಾಂಬ್ಳೆ ಸ್ಥಳಕ್ಕೆ ಆಗಮಿಸಿ ಕಾಮಗಾರಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು. ನಂತರ ಕಾಮಗಾರಿಗೆ ಚಾಲನೆ ನೀಡಲಾಯಿತು.

Leave a Reply