fbpx

ಲೋಕಸಭೆ ಚುನಾವಣೆ : ಮದ್ಯ ನಿಷೇಧ ಜಾರಿ

ಲೋಕಸಭೆ ಸಾರ್ವತ್ರಿಕ ಚುನಾವಣೆಯ ಮತದಾನ ಏ. ೧೭ ರಂದು ನಡೆಯಲಿರುವುದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ, ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಮಧ್ಯಪಾನ, ಮಧ್ಯ ಮಾರಾಟ ನಿಷೇಧಿಸಿ ಕರ್ನಾಟಕ ಅಬಕಾರಿ ಕಾಯ್ದೆಯಡಿ ೧೯೬೫ ರ ಕಲಂ ೨೧ ರ ಪ್ರಕಾರ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ  ಕೆ.ಪಿ. ಮೋಹನ್‌ರಾಜ್ ಅವರು ಆದೇಶ ಹೊರಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯಾದ್ಯಂತ ಏ. ೧೫ ರ ಸಾಯಂಕಾಲ ೬.೦೦ ಗಂಟೆಯಿಂದ ಏ. ೧೭ ರ ಸಂಜೆ ೬.೦೦ ಗಂಟೆಯವರೆಗೆ ಎಲ್ಲಾ ವೈನ್‌ಶಾಪ್, ಬಾರಗಳು, ಸಗಟು ಮತ್ತು ಚಿಲ್ಲರೆ ಮಧ್ಯ ಮಾರಾಟ ನಿಷೇಧಿಸಲಾಗಿದೆ.  ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ಮುಖಂಡತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಚುನಾವಣೆ : ಸಂತೆ-ಜಾತ್ರೆಗಳ ಮುಂದೂಡಿಕೆ
: ಲೋಕಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಏ. ೧೭ ರಂದು ಮತದಾನ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಅಂದು ಜಿಲ್ಲೆಯಲ್ಲಿ ನಡೆಯುವ ಎಲ್ಲ ಸಂತೆ-ಜಾತ್ರೆಗಳನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ತಿಳಿಸಿದ್ದಾರೆ.
Please follow and like us:
error

Leave a Reply

error: Content is protected !!