ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ ಏ.   : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಸಹ ಶಿಕ್ಷಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
  ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ನೇಮಕಾತಿಗಾಗಿ ಹೊರಡಿಸಿರುವ ಅಧಿಸೂಚನೆ ಅನ್ವಯ ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಿಗೆ (೧ ರಿಂದ ೦೫ ನೇ ತರಗತಿ) ಒಟ್ಟು ೧೩೫ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.  ಉನ್ನತೀಕರಿಸಿದ ಶಾಲೆಗಳಿಗೆ (೦೬ ರಿಂದ ೦೮ ನೇ ತರಗತಿ) ಕನ್ನಡ ಸಾಮಾನ್ಯ- ೧೪೧ ಹುದ್ದೆ ಮತ್ತು ಆಂಗ್ಲ ಭಾಷೆ- ೧೪೧ ಹುದ್ದೆಗಳು.  ಸರ್ಕಾರಿ ಪ್ರೌಢಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ವಿವಿಧ ವಿಷಯಗಳಲ್ಲಿ ಖಾಲಿ ಇರುವ ಒಟ್ಟು ೪೪ ಹುದ್ದೆಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.schooleducation.kar.nic.inಮೂಲಕ ಪಡೆಬಹುದು ಅಥವಾ ಸಹಾಯವಾಣಿ ಸಂ : ೦೮೫೩೯-೨೨೧೩೦೩ ಕ್ಕೆ ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ. ಶ್ಯಾಮಸುಂದರ್  ತಿಳಿಸಿದ್ದಾರೆ.

Related posts

Leave a Comment