ಮೊರಾರ್ಜಿ ದೇಸಾಯಿ ವಿಜ್ಞಾನ ಪ್ರಥಮ ಪಿಯುಸಿ ವಸತಿ ಕಾಲೇಜು : ಅರ್ಜಿ ಆಹ್ವಾನ

: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿಗೆ ಎಸ್.ಎಸ್.ಎಲ್.ಸಿ ಯಲ್ಲಿ ಪಾಸಾದ ಮತ್ತು ಈ ಹಿಂದೆ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
  ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜಿನಲ್ಲಿ ಶೇಕಡಾ ೫೦ ರಷ್ಟು ಸೀಟುಗಳನ್ನು ವಿದ್ಯಾರ್ಥಿನಿಯರಿಗೆ ಹಾಗೂ ಶೇಕಡಾ ೫೦ ರಷ್ಟು ಸೀಟುಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು. ವಸತಿ ಕಾಲೇಜಿಗೆ ಅರ್ಜಿ ಸಲ್ಲಿಸಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯದ ಗರಿಷ್ಠ ಮಿತಿ ರೂ.೨.೦೦ ಲಕ್ಷ, ಪ್ರವರ್ಗ-೧ ರೂ.೧.೦೦ ಲಕ್ಷ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ವರ್ಗದವರ ವಾರ್ಷಿಕ ಆದಾಯ ರೂ.೪೪.೫೦೦/- ಮೀರುವಂತಿಲ್ಲ.  ಹೈದರಾಬಾದ್ ಕರ್ನಾಟಕದ ಸ್ಥಳೀಯ ಅಭ್ಯರ್ಥಿಗಳಿಗೆ ಪ್ರವೇಶಾತಿಯನ್ನು ಮೀಸಲಿರಿಸಲಾಗಿದೆ, ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಿ, ಎರಡನೇ ಆದ್ಯತೆಯನ್ನು ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ. 
   ನಿಗದಿತ ಅರ್ಜಿಯನ್ನು ಮೇ.೧೩ ರಿಂದ ವಿತರಿಸಲಾಗುತ್ತಿದ್ದು, ಅರ್ಜಿಗಳನ್ನು ಕೊಪ್ಪಳ ಜಿಲ್ಲೆಯ ಯಾವುದೇ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಂದ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜು, ಕೊಪ್ಪಳ (ಗದಗ ರಸ್ತೆ, ದದೇಗಲ್) ಇವರಿಗೆ ಮೇ.೨೩ ರೊಳಗಾಗಿ ಸಲ್ಲಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು, ಕೊಪ್ಪಳ ದೂರವಾಣಿ : ೦೮೫೩೯-೨೨೦೧೩೮ ಇವರನ್ನು ಸಂಪರ್ಕಿಸಬಹುದು .
Please follow and like us:
error