ಸಮೀಕ್ಷೆಗೆ ಸಹಕರಿಸಿ : ಬಸವರಾಜ ಹಿಟ್ನಾಳ್ ಮನವಿ

 ಕೊಪ್ಪಳ : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಗವಾಗಿ ತಾಲೂಕಿನ ಹಿಟ್ನಾಳ್ ಗ್ರಾಮದಲ್ಲಿ ಗಣತಿದಾರರು ಕೊಪ್ಪಳ ಮಾಜಿ ಶಾಸಕ ಬಸವರಾಜ ಹಿಟ್ನಾಳ್ ಅವರ ನಿವಾಸಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು.
  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ರಮದ ಅಂಗವಾಗಿ ಗಣತಿದಾರರು ಈಗಾಗಲೆ ಮನೆ ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಕಾರ್ಯ ಪ್ರಾರಂಭಿಸಿದ್ದಾರೆ.  ತಾಲೂಕಿನ ಹಿಟ್ನಾಳ್ ಗ್ರಾಮದಲ್ಲಿ ಕೊಪ್ಪಳ ಮಾಜಿ ಶಾಸಕ ಬಸವರಾಜ ಹಿಟ್ನಾಳ್ ಅವರ ಮನೆಗೆ ಭೇಟಿ ನೀಡಿದ ಗಣತಿದಾರರಿಗೆ, ಸಮರ್ಪಕ ಮಾಹಿತಿ ನೀಡುವ ಮೂಲಕ ಸಹಕಾರ ನೀಡಿದ ಬಸವರಾಜ ಹಿಟ್ನಾಳ್ ಅವರು, ಸಮೀಕ್ಷೆ ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲ ಸಾರ್ವಜನಿಕರು ಗಣತಿದಾರರಿಗೆ ಸರಿಯಾದ ಮಾಹಿತಿ ನೀಡಿ ಸಹಕರಿಸಬೇಕು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು. ಕೊಪ್ಪಳ ತಹಸಿಲ್ದಾರ್ ಪುಟ್ಟರಾಮಯ್ಯ, ಗಣತಿದಾರರಾದ ಅಕ್ಕಮಹಾದೇವಿ, ಈರಣ್ಣ ಕುಂಬಾರ್ ಮುಂತಾದವರಿದ್ದರು.

Leave a Reply