ಜು. ೧೬ ರಿಂದ ಕೊಪ್ಪಳದಲ್ಲಿ ಪರಿಸರ ಸಂರಕ್ಷಣೆ ಮತ್ತು ನಿರ್ವಹಣೆ ತರಬೇತಿ ಕಾರ್ಯಾಗಾರ

  ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯು ಕೊಪ್ಪಳ ಜಿಲ್ಲಾ ಪಂಚಾಯತಿಯ ಸಹಯೋಗದೊಂದಿಗೆ ‘ಪರಿಸರ ಸಂರಕ್ಷಣೆ ಮತ್ತು ನಿರ್ವಹಣೆ’ ಕುರಿತ ತರಬೇತಿ ಕಾರ್ಯಾಗಾರ ಜು. ೧೬ ರಿಂದ ೧೮ ರವರೆಗೆ ಮೂರು ದಿನಗಳ ಕಾಲ ಕೊಪ್ಪಳ ತಾ.ಪಂ. ಸಭಾಂಗಣದಲ್ಲಿ ಹಮ್ಮಿಕೊಂಡಿದೆ.
  ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಜು. ೧೬ ರಂದು ಬೆಳಿಗ್ಗೆ ೧೦ ಗಂಟೆಗೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ. ರವಿ ಅವರು ನೆರವೇರಿಸುವರು ಎಂದು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ನಿರ್ದೇಶಕರು  ತಿಳಿಸಿದ್ದಾರೆ.

Leave a Reply