ಜ.೦೮ ರಂದು ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ.

ಕೊಪ್ಪಳ, ಜ.೦೫
(ಕ ವಾ) ಕೊಪ್ಪಳ ಜಿಲ್ಲಾ ಪಂಚಾಯತ್‌ನ ಪ್ರಸಕ್ತ ಸಾಲಿನ ಜಿಲ್ಲಾ ಜಾಗೃತ
ಮತ್ತು ಉಸ್ತುವಾರಿ ಸಮಿತಿಯ ೩ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜ.೦೮ ರಂದು
ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ
ಏರ್ಪಡಿಸಲಾಗಿದೆ.
      ಲೋಕಸಭಾ ಸದಸ್ಯರಾದ ಕರಡಿ ಸಂಗಣ್ಣ ಅವರು ಸಭೆಯ ಅಧ್ಯಕ್ಷತೆ
ವಹಿಸುವರು.  ಸಭೆಯಲ್ಲಿ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ
ನಡೆಯಲಿದೆ. ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿನ ಕೇಂದ್ರ ಹಾಗೂ ಪುರಸ್ಕೃತ
ಯೋಜನೆಗಳ ೨೦೧೫ರ ಅಕ್ಟೋಬರ್ ನಿಂದ ಡಿಸೆಂಬರ್ ಅಂತ್ಯದವರೆಗಿನ ಪ್ರಗತಿ ವರದಿಯನ್ನು ಜ.೦೪
ರೊಳಗಾಗಿ   ಜಿಲ್ಲಾ ಪಂಚಾಯತ್‌ನ ಯೋಜನಾ ವಿಭಾಗಕ್ಕೆ ಸಲ್ಲಿಸಬೇಕು ಹಾಗೂ ಅಂದಿನ ಸಭೆಗೆ 
ಪ್ರಗತಿ ವರದಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ
ಅಧಿಕಾರಿ ಆರ್.ರಾಮಚಂದ್ರನ್ ಅವರು ತಿಳಿಸಿದ್ದಾರೆ.
Please follow and like us:
error